ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮುಂಬೈ ನ್ಯಾಯಾಲಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಏಳು ವರ್ಷ ಪ್ರಕರಣದ ವಿಚಾರಣೆ ನಡೆಸಿದ ಬಳಿಕ ತೀರ್ಪು ಹೊರಬಿದ್ದಿದೆ. ರಾಮ್ ಗೋಪಾಲ್ ವರ್ಮಾ ದೂರುದಾರರಿಗೆ ಪರಿಹಾರವಾಗಿ 3.75 ಲಕ್ಷ ರೂಪಾಯಿಗಳನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಮೂರು ತಿಂಗಳಲ್ಲಿ ಪರಿಹಾರ ಪಾವತಿಸಲು ವಿಫಲವಾದರೆ, ಹೆಚ್ಚುವರಿಯಾಗಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸೂಚಿಸಿದೆ.
ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ಚೆಕ್ ಬೌನ್ಸ್ ಪ್ರಕರಣದ ತೀರ್ಪನ್ನು ನೀಡಬೇಕಿತ್ತು. ಆದರೆ ರಾಮ್ ಗೋಪಾಲ್ ವರ್ಮಾ ನ್ಯಾಯಾಲಯಕ್ಕೆ ಗೈರಾಗಿದ್ದರಿಂದ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
2018ರಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಮುಂಬೈನಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಮಹೇಶ್ಚಂದ್ರ ಮಿಶ್ರಾ ಎಂಬವರು ಪ್ರಕರಣ ದಾಖಲಿಸಿದ್ದರು. 2022ರ ಜೂನ್‌ನಲ್ಲಿ ವರ್ಮಾ ಅವರಿಗೆ ವೈಯಕ್ತಿಕ ಬಾಂಡ್ ಮತ್ತು 5000 ರೂ. ಭದ್ರತಾ ಠೇವಣಿ ನೀಡಿದ ನಂತರ ಜಾಮೀನು ನೀಡಲಾಗಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿದ್ದರೂ ರಾಮ್ ಗೋಪಾಲ್ ವರ್ಮಾ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
Be the first to comment