ರಾಮಾಯಣ

‘ರಾಮಾಯಣ’ 1500 ಕೋಟಿ ಕ್ಲಬ್‌ಗೆ ಎಂಟ್ರಿ

ರಣಬೀರ್ ಕಪೂರ್ ಮತ್ತು ಯಶ್ ಅಭಿನಯದ ‘ರಾಮಾಯಣ’ ಸಿನಿಮಾದ ಬಾಕ್ಸ್ ಆಫೀಸ್‌ ಕಲೆಕ್ಷನ್ ವಿಶ್ವದಾದ್ಯಂತ  1,500 ಕೋಟಿ ರೂಪಾಯಿ ಗಡಿ ದಾಟಿದೆ.

ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದ ಭಾರತದ ಒಟ್ಟು ಗ್ರಾಸ್ ಕಲೆಕ್ಷನ್ 1009.05 ಕೋಟಿ ರೂಪಾಯಿಗೆ ತಲುಪಿದೆ. ವಿದೇಶದಲ್ಲೂ ಚಿತ್ರದ ಓಟ ಮುಂದುವರಿದಿದ್ದು, ವಿದೇಶದ ಒಟ್ಟು ಗ್ರಾಸ್ ಕಲೆಕ್ಷನ್ 510 ಕೋಟಿ ರೂಪಾಯಿ ಆಗಿದೆ.  ವಿಶ್ವದಾದ್ಯಂತ ಚಿತ್ರದ ಒಟ್ಟು ಗಳಿಕೆ 1519.05 ಕೋಟಿ ರೂಪಾಯಿ ಮುಟ್ಟಿದೆ.

ರಳದಲ್ಲಿ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಸಿಗುತ್ತಿದ್ದರೆ, ತೆಲುಗು ಸೇರಿದಂತೆ ಕೆಲವು ಭಾಷೆಗಳಲ್ಲಿ ಹೊಸ ಸಿನಿಮಾಗಳ ಆಗಮನದಿಂದ ಕಲೆಕ್ಷನ್ ನಿಧಾನವಾಗಿದೆ.  ಈ ಸಿನಿಮಾ  2,000 ಕೋಟಿ ರೂಪಾಯಿ ಗುರಿಯತ್ತ ಗಮನ ಹರಿಸಿದೆ. ವಿದೇಶದ ಹೊಸ ರಾಷ್ಟ್ರಗಳಲ್ಲೂ ಸಿನಿಮಾ ಬಿಡುಗಡೆಯಾಗುತ್ತಿದೆ.

ನಮಿತ್ ಮಲ್ಹೋತ್ರಾ ಮತ್ತು ಯಶ್ ಬಂಡವಾಳ ಹೂಡಿರುವ ‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಮೊದಲ ಭಾಗದ ಯಶಸ್ಸು, 2028ರ ದೀಪಾವಳಿಗೆ ಬಿಡುಗಡೆಯಾಗಲಿರುವ ಎರಡನೇ ಭಾಗದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!