‘ರಾಮಾಯಣ’ ಭಾರತಕ್ಕಿಂತ ಮುಂಚೆ ವಿದೇಶದಲ್ಲಿ ತೆರೆಗೆ

ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ರಾಮಾಯಣ’  ಭಾರತಕ್ಕಿಂತ ಎರಡು ದಿನ ಮುಂಚಿತವಾಗಿ ವಿದೇಶಿ ಮಾರುಕಟ್ಟೆಯಲ್ಲಿ ತೆರೆಗೆ ಬರಲಿದೆ.

‘ರಾಮಾಯಣ’ ಸಿನಿಮಾ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನವೆಂಬರ್ 6ರಂದು ಬಿಡುಗಡೆಯಾಗಲಿದೆ. ಆದರೆ ಭಾರತದಲ್ಲಿ ನವೆಂಬರ್ 8ರಂದು ಸಿನಿಮಾ ತೆರೆಗೆ ಬರಲಿದೆ. ವಿದೇಶಗಳಲ್ಲಿ ಸಾಮಾನ್ಯವಾಗಿ ಶುಕ್ರವಾರ ಸಿನಿಮಾಗಳು ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ಈ ರೀತಿಯ ರಿಲೀಸ್ ಪ್ಲಾನ್ ಮಾಡಲಾಗಿದೆ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ  ತಿಳಿಸಿದ್ದಾರೆ.

ವಿದೇಶದಲ್ಲಿ ‘ರಾಮಾಯಣ’ ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ವಿದೇಶಿ ಪ್ರದರ್ಶನಗಳಿಂದ ಚಿತ್ರದ ದೃಶ್ಯಗಳು ಎಚ್‌ಡಿ ಕ್ವಾಲಿಟಿಯಲ್ಲಿ ಸೋರಿಕೆಯಾಗುವ ಸಾಧ್ಯತೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಸನ್ನಿವೇಶಗಳ ಸ್ಪಾಯ್ಲರ್‌ಗಳು ಹರಿದಾಡುವ ಆತಂಕವನ್ನು ಫ್ಯಾನ್ಸ್ ವ್ಯಕ್ತಪಡಿಸಿದ್ದಾರೆ.  ವಿಶ್ವದಾದ್ಯಂತ ಒಂದೇ ದಿನ ‘ರಾಮಾಯಣ’ ಚಿತ್ರವನ್ನು ಬಿಡುಗಡೆ ಮಾಡುವಂತೆ ಅಭಿಮಾನಿಗಳು ಚಿತ್ರತಂಡಕ್ಕೆ ಮನವಿ ಮಾಡುತ್ತಿದ್ದಾರೆ.

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದ ಟ್ರೇಲರ್ ಈಗಾಗಲೇ ಭಾರೀ ಸದ್ದು ಮಾಡಿದೆ. ಬಿಡುಗಡೆಯಾದ 5 ದಿನಗಳಲ್ಲೇ ಟ್ರೇಲರ್ 100 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.

ಚಿತ್ರದಲ್ಲಿ ರಣ್‌ಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ  ಸಾಯಿ ಪಲ್ಲವಿ ಸೀತೆಯಾಗಿ, ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!