ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಖ್ಯಾತ ಕನ್ನಡ ಚಿತ್ರ ನಟ, ನಿರ್ದೇಶಕ, ನಿರ್ಮಾಪಕ ರಮೇಶ್ ಅರವಿಂದ್ ಸೇರಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ.
ಸೆ.14ರಂದು ಸುವರ್ಣ ವಿಧಾನಸೌಧದಲ್ಲಿ ನಡೆಯುವ 10ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರ ಗೌಡ ತಿಳಿಸಿದ್ದಾರೆ.
ರಮೇಶ್ ಅಲ್ಲದೇ ನಗರಾಭಿವೃದ್ಧಿ ತಜ್ಞ, ಸಮಾಜ ಸೇವಕ ವಿ.ರವಿಚಂದರ್, ಬೀದರ್ನ ಬಸವತತ್ವ ಪ್ರಚಾರಕಿ ಮಾತೆ ಅನ್ನಪೂರ್ಣ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಗೌರವ ಡಾಕ್ಟರೇಟ್ಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಸಾಧಕರ ಪರವಾಗಿ ಬೇರೆಯವರೂ ಶಿಫಾರಸು ಅರ್ಜಿ ಸಲ್ಲಿಸಬಹುದಾಗಿತ್ತು. ಈ ಬಾರಿ ಗೌರವ ಡಾಕ್ಟರೇಟ್ಗೆ ಆಯ್ಕೆಯಾದವರೆಲ್ಲರೂ ಅವರಾಗಿ ಅರ್ಜಿ ಹಾಕಿಲ್ಲ. ಇವರ ಪರ ಶಿಫಾರಸು ಅರ್ಜಿ ಸಲ್ಲಿಸಲಾಗಿತ್ತು ಎಂದರು.
ರಾಜ್ಯಪಾಲ ಥಾವರಚಂದ ಗೆಹ್ಲೋತ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಡಾ. ಸಿ.ಎನ್. ಅಶ್ವತ್ಥನಾರಾಯಣ ಉಪಸ್ಥಿತರಿರುವರು. ಆಂಧ್ರಪ್ರದೇಶ ವಿಜಯನಗರಂ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಪ್ರೊ. ಟಿ.ವಿ. ಕಟ್ಟಿಮನಿ ಘಟಿಕೋತ್ಸವ ಭಾಷಣ ಮಾಡುವರು ಎಂದು ಕುಲಪತಿ ತಿಳಿಸಿದ್ದಾರೆ.
Be the first to comment