ದರ್ಶನ್ ಅಭಿಮಾನಿಗಳ ಟ್ರೋಲ್ ಬಗ್ಗೆ ಡಿ ಬಾಸ್ ಅಭಿಮಾನಿಗಳಿಗೆ ನಟಿ ರಮ್ಯಾ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
‘ಎಲ್ಲ ಡಿ ಬಾಸ್ ಅಭಿಮಾನಿಗಳಿಗೆ ನನ್ನ ಇನ್ಸ್ಟಾಗ್ರಾಮ್ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎಂಬುದಕ್ಕೆ ನಿಮ್ಮ ಕಮೆಂಟ್ಗಳೇ ಸಾಕ್ಷಿ’ ಎಂದು ರಮ್ಯಾ ಬರೆದುಕೊಂಡಿದ್ದಾರೆ.
ದರ್ಶನ್ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ದಿನ ರಮ್ಯಾ, ದರ್ಶನ್ ಕೇಸಿನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
‘ಅತ್ಯಂತ ಕೊಳಕು ಭಾಷೆಯಲ್ಲಿ ನನ್ನನ್ನು ಟ್ರೋಲ್ ಮಾಡುತ್ತಿದ್ದಾರೆ. ಇದು ನನಗೊಬ್ಬಳಿಗೇ ಅಲ್ಲ. ಬೇರೆ ನಟ, ನಟಿಯರಿಗೂ ಹೀಗೆ ಆಗಿದೆ. ಅವರ ಪತ್ನಿ, ಮಕ್ಕಳನ್ನೂ ಬಿಟ್ಟಿಲ್ಲ. ನಾನು ಈ ಬಗ್ಗೆ ಕೇಸು ದಾಖಲಿಸಿದ್ದೇನೆ. ಹೀಗೆ ಟ್ರೋಲ್ ಮಾಡುವವರು ಬಹುತೇಕರು ಯುವ ವಯಸ್ಸಿನವರು. ಅವರು ತಮ್ಮ ಮೌಲ್ಯಯುತ ಸಮಯ, ವರ್ಷಗಳನ್ನು ಈ ರೀತಿ ನಿಷ್ಕಾರಣವಾಗಿ ಹಾಳು ಮಾಡುತ್ತಿದ್ದಾರೆ. ಯಾರೂ ಕಾನೂನಿಗಿಂತ ಮಿಗಿಲು ಇಲ್ಲ.ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ’ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ವಿಚಾರಣೆ ನಡೆದ ಬಳಿಕ ರಮ್ಯಾ ‘ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ’ ಎಂದು ಇನ್ಸ್ಟಾಗ್ರಾಮ್ ಸ್ಟೋರಿ ಮತ್ತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು.
—-





Be the first to comment