ರಾಜ್ ಶೆಟ್ಟಿ ಸಿನಿಮಾ ಮೂಲಕ ರಮ್ಯಾ ಕಂಬ್ಯಾಕ್?

ಖ್ಯಾತ ನಟಿ ರಮ್ಯಾ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ನಿರ್ದೇಶಕ ರಾಜ್ ಬಿ ಶೆಟ್ಟಿ ನಿರ್ದೇಶನದ ಸಿನಿಮಾದ ಮೂಲಕ ರಮ್ಯಾ ಕಂಬ್ಯಾಕ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ರಮ್ಯ ಸಿನಿಮಾಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಈ ಸುದ್ದಿ ಖುಷಿ ತಂದಿದೆ. ರಮ್ಯಾರನ್ನ ಸ್ಕ್ರೀನ್ ಮೇಲೆ ನೋಡಲು ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ.

ಇತ್ತೀಚೆಗಷ್ಟೇ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಭೇಟಿಯಾಗಿದ್ದು, ಈ ವೇಳೆ ರಾಜ್ ಬಿ ಶೆಟ್ಟಿ ರಮ್ಯಾಗೆ ಕಥೆ ಹೇಳಿದ್ದಾರೆ. ಕಥೆ ಇಷ್ಟಪಟ್ಟಿರುವ ರಮ್ಯಾ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದು ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ರಮ್ಯಾ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.

ಪುನೀತ್ ರಾಜ್‌ಕುಮಾರ್ ಹೀರೋ ಆಗಿದ್ದ ‘ಅಭಿ’ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ ರಮ್ಯಾ ಒಂದೂವರೆ ದಶಕ ಚಿತ್ರರಂಗದಲ್ಲಿ ಸಕ್ರಿಯ ನಟಿಯಾಗಿದ್ದರು. ಕನ್ನಡ ಅಲ್ಲದೇ ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು.

2012 ರಲ್ಲಿ ರಾಜಕೀಯ ಪ್ರವೇಶಿಸಿದ ಬಳಿಕ ರಮ್ಯಾ ಚಿತ್ರರಂಗದಿಂದ ದೂರ ಸರಿದರು. 2012 ರಲ್ಲಿ 4 ಸಿನಿಮಾ, 2014 ರಲ್ಲಿ ಒಂದು ಹಾಗೂ 2016 ರಲ್ಲಿ ಒಂದು ಸಿನಿಮಾದಲ್ಲಿ ಅವರು ನಟಿಸಿದರು.
ರಮ್ಯಾ ಅವರಿಗೆ ಈಗಲೂ ಅಭಿಮಾನಿಗಳಿದ್ದಾರೆ. ಹಲವು ನಿರ್ಮಾಪಕರು ಅವರನ್ನು ಕನ್ನಡ ಚಿತ್ರರಂಗಕ್ಕೆ ಮತ್ತೆ ಸೆಳೆಯಲು ಯತ್ನಿಸುತ್ತಿದ್ದಾರೆ. ರಮ್ಯಾ ಮತ್ತೆ ಸಿನಿಮಾದಲ್ಲಿ ನಟಿಸುತ್ತಾರಾ ಎನ್ನುವುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!