ರಸ್ತೆಯಲ್ಲೇ ಅತ್ತ ನಟಿ ರಮ್ಯಾ!

ಬೀದಿನಾಯಿಗಳ ಮೇಲಿನ ಹಿಂಸೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿ ರಸ್ತೆಯಲ್ಲೇ  ಅತ್ತಿದ್ದಾರೆ.

ಫ್ರೀಡಂಪಾರ್ಕ್‌ನಲ್ಲಿ ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ ಬೆಂಗಳೂರಿನ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದರು. ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ ಎಂದರು.

ಬೆಂಗಳೂರಿನ ಕಗ್ಗದಾಸಪುರದಲ್ಲಿ ನಾಪತ್ತೆಯಾಗಿರುವ ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾಗಾದ ನನಗೆ ಆಘಾತ ಆಯಿತು. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ರಮ್ಯಾ ಹೇಳಿದರು.

ಮಹದೇವಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ನಾಯಿಗಳ ಪ್ರಕರಣ  ದಾಖಲಾಗಿದೆ. ಪ್ರಕರಣ  ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದ್ದು ಏಪ್ರಿಲ್ 16ರಂದು ಮುಂದಿನ ವಿಚಾರಣೆ ನಡೆಯಲಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!