ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಸತ್ಯವನ್ನು ತಿಳಿದುಕೊಳ್ಳಬೇಕು ಎಂದು ಮೋಹಕತಾರೆ ರಮ್ಯಾ ಧ್ವನಿ ಎತ್ತಿದ್ದಾರೆ.
ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮತ್ತು ಮಹಿಳೆಯರು ಕಾಣೆಯಾದ ಘಟನೆಗಳ ಬಗ್ಗೆ ಕೇಳಿ ನನಗೆ ತುಂಬಾ ಆಘಾತವಾಗಿದೆ. ಇದು ಪೂಜಾ ಸ್ಥಳವಾಗಿದ್ದು, ಕರ್ನಾಟಕದ ಜನರು ಇದನ್ನು ಹೆಚ್ಚು ಪೂಜಿಸುತ್ತಾರೆ. ನ್ಯಾಯಯುತ ತನಿಖೆ ನಡೆಯುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ಸತ್ಯವನ್ನು ತಿಳಿದುಕೊಳ್ಳಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಟ್ಟಾಗಿ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರರಂಗದ ಒಬ್ಬೊಬ್ಬರಾಗಿ ಧರ್ಮಸ್ಥಳದ ಪ್ರಕರಣದ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ. ದುನಿಯಾ ವಿಜಯ್ ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗಲ್ಲವೆಂದಿದ್ದರು. ಪ್ರಕಾಶ್ ರೈ, ಸೌಜನ್ಯ ಪ್ರಕರಣ ಹಾಗೂ ಧರ್ಮಸ್ಥದಲ್ಲಿ ನಡೆದಿರುವ ನಿಗೂಢ ಸಾವುಗಳ ಬಗ್ಗೆ ಹೋರಾಟ ಮಾಡಲು ಮುಂದಾಗಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದು, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ, ಎಸ್‌ಐಟಿ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ. ತನಿಖೆ ವಿಷಯದಲ್ಲಿ ಯಾರ ಒತ್ತಡವೂ ಇಲ್ಲ. ಕಾನೂನು ರೀತಿಯಲ್ಲೇ ಕ್ರಮ ಆಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.






Be the first to comment