ರನ್ಯಾ ರಾವ್

ಇಂದು ರನ್ಯಾ ರಾವ್ ಜಾಮೀನು ಅರ್ಜಿ ಆದೇಶ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ  ಭವಿಷ್ಯ ಇಂದು  ಮಧ್ಯಾಹ್ನದ ನಂತರ  ನಿರ್ಧಾರವಾಗಲಿದೆ.

ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು  ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಇಂದು ನಡೆಸಲಿದೆ. ಆರೋಪಿ ನಟಿ ರನ್ಯಾ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಾಡಿದ್ದಾರೆ.

ಡಿಆರ್‌ಐ‌ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಮಾಡಿಲ್ಲ. ಹೆಣ್ಣು ಎಂದೂ ನೋಡದೆ ರಾತ್ರಿಯಿಡೀ ತನಿಖೆ ಮಾಡಿ ಮಾನಸಿವಾಗಿ ಹಿಂಸೆ ನೀಡುವ ಕೆಲಸವಾಗಿದೆ. ಅರೆಸ್ಟ್ ಮೇಮೊ ಕೂಡ ಕೊಟ್ಟಿಲ್ಲ. ಈ ಪ್ರಕರಣದಲ್ಲಿ ನನ್ನ ಕಕ್ಷಿದಾರೆಯ ಪಾತ್ರ ಇಲ್ಲ‌. ತನಿಖೆಗೆ ಸಹಕಾರ‌ ನೀಡುತ್ತಿದ್ದು, ಜಾಮೀನು ನೀಡುವಂತೆ ನ್ಯಾ ಪರ ಹಿರಿಯ ವಕೀಲ ಮನವಿ ಮಾಡಿದ್ದಾರೆ.

ಡಿಆರ್‌ಐ ಪರ ವಕೀಲ ಮಧುರಾವ್, ಪ್ರಾಥಮಿಕ ತನಿಖೆಯ ವೇಳೆ ಆರೋಪಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಮಾಡಿರುವುದು ಕಂಡುಬಂದಿದೆ. ಚಿನ್ನ ವಶಕ್ಕೆ ಪಡೆದುಕೊಂಡು ತನಿಖೆ ಮಾಡಲಾಗುತ್ತಿದೆ. ಮನೆ ಶೋಧ ಕಾರ್ಯದ ವೇಳೆ  ಹಣ ಹಾಗೂ ಚಿನ್ನಭರಣಗಳು ಪತ್ತೆ ಆಗಿವೆ. ಒಂದು ದೊಡ್ಡ ಸಿಂಡಿಕೇಟ್ ಕೆಲಸ ಮಾಡುತ್ತಿರುವ ಬಗ್ಗೆ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ.  ಹವಾಲ ಹಣದಲ್ಲಿ ವ್ಯವಹಾರ ಆಗಿರುವ ಬಗ್ಗೆ ಅನುಮಾನಗಳು ಕೂಡ ಇವೆ. ಪೊಲೀಸ್ ಪ್ರೋಟೊಕಾಲ್ ದುರುಪಯೋಗ ಆಗಿದ್ದು, ಆ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಆರೋಪಿ ನಟಿ ರನ್ಯಾ ರಾವ್‌ಗೆ ಜಾಮೀನು ನೀಡಿದರೆ, ತನಿಖೆಗೆ ಹಿನ್ನಡೆ ಆಗುತ್ತದೆ ಎಂದು  ಪ್ರತಿವಾದ ಮಾಡಿದ್ದಾರೆ.

ದುಬೈನಿಂದ ಕೋಟಿ ಕೋಟಿ ಬೆಲೆಬಾಳುವ ಚಿನ್ನ ತಂದು ಡಿಆರ್‌ಐ ಅಧಿಕಾರಿಗಳಿಗೆ ಲಾಕ್ ಆಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಬಗ್ಗೆ ವಾದ-ಪ್ರತಿವಾದ ಅಲಿಸಿರುವ ನ್ಯಾಯಾದೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!