‘ಕುಲದಲ್ಲಿ ಕೀಳ್ಯಾವುದೋ’ ನಾಯಕನ ಮೇಲೆ ರೇಪ್‌ ಕೇಸ್ ದಾಖಲು!

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ನಾಯಕ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಅತ್ಯಾಚಾರ ಕೇಸ್ ದಾಖಲಾಗಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ  ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರ  ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಈ ಹೊತ್ತಲ್ಲೇ ನಾಯಕ ನಟನ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಮೂಲಕ ಮಡೆನೂರು ಮನು ಸಿನಿಮಾರಂಗದಲ್ಲೂ ಅವಕಾಶ ಗಿಟ್ಟಿಸಿಕೊಂಡಿದ್ದ. ಯೋಗರಾಜ್ ಭಟ್ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ  ಮನು ಬ್ಯಾಂಡ್ ಸೆಟ್ ಬಾರಿಸುವ ಯುವಕನಾಗಿ ಕಾಣಿಸಿಕೊಂಡಿದ್ದಾನೆ.

ಯೋಗರಾಜ್ ಭಟ್ ಮತ್ತು ಇಸ್ಲಾಮುದ್ದೀನ್ ಸೇರಿಕೊಂಡು ಈ ಸಿನಿಮಾದ ಕಥೆ ಬರೆದಿದ್ದಾರೆ. ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಹಾಗೂ ವಿದ್ಯಾ ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ಸ್ವತಃ ನಿರ್ದೇಶಕರಾಗಿದ್ದರೂ, ಈ ಸಿನಿಮಾದ ನಿರ್ದೇಶನವನ್ನು ಕೆ. ರಾಮ್ ನಾರಾಯಣ್ ಅವರ ಬಳಿ ಮಾಡಿಸಿದ್ದಾರೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!