ಹೊಸ ಸಿನಿಮಾದಲ್ಲಿ ರಶ್ಮಿಕಾ-ದೇವರಕೊಂಡ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೋಡಿ ಮದುವೆಗೂ ಮುನ್ನವೇ ಹೊಸ ಸಿನಿಮಾದಲ್ಲಿ ಒಂದಾಗುತ್ತಿದ್ದಾರೆ.

ಈ ಜೋಡಿಯ ಹೊಸ ಚಿತ್ರಕ್ಕೆ ‘ರಣಬಾಲಿ’ ಎಂದು ಶೀರ್ಷಿಕೆ ಇಡಲಾಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ  ನಿರೀಕ್ಷೆ ಮೂಡಿಸಿದೆ. ‘ರಣಬಾಲಿ’ ವಿಜಯ್ ದೇವರಕೊಂಡ ಅವರ 14ನೇ ಸಿನಿಮಾ ಆಗಿದೆ.

ಈ ಚಿತ್ರದಲ್ಲಿ, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸುವ ಯುವಕನ ಕಥೆಯನ್ನು ಚಿತ್ರಿಸಲಾಗಿದೆ. ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆ ಈ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

ವಿಜಯ್ ದೇವರಕೊಂಡ ಅವರು ‘ರಣಬಾಲಿ’ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ‘ಜಯಮ್ಮ’ ಎಂಬ  ಪಾತ್ರವನ್ನು ನೀಡಲಾಗಿದೆ. ಅಜಯ್–ಅತುಲ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ರಾಹುಲ್  ನಿರ್ದೇಶನದ ಜವಾಬ್ದಾರಿ ವಹಿಸಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ನಡುವೆ  ಹೊಸ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!