ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ಐಪಿಎಲ್ ಟಿ-20 ಟೂರ್ನಿಯ 16ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಮನೋರಂಜನಾ ಕಾರ್ಯಕ್ರಮ ನೀಡುವ ಮೂಲಕ ಪ್ರೇಕ್ಷಕರ ಹೃದಯ ಗೆದ್ದರು.
ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಪುಷ್ಪಾ ಚಿತ್ರದ ಸಾಮಿ ಸಾಮಿ ಹಾಡಿಗೆ ಹೆಜ್ಜೆ ಹಾಕಿ ಗಮನ ಸೆಳೆದರು.
ರಶ್ಮಿಕಾ ಮಂದಣ್ಣ ಕೆಂಪು ಹಾಗೂ ಚಿನ್ನದ ಬಣ್ಣದ ಬ್ಲೌಸ್ ಹಾಗೂ ಸ್ಕರ್ಟ್ ಧರಿಸಿ ಸಾಮಿ ಸಾಮಿ ಹಾಡಿಗೆ ಹೆಜ್ಜೆ ಹಾಕಿದರು. ಅಲ್ಲದೇ ಆಸ್ಕರ್ ಪ್ರಶಸ್ತಿ ವಿಜೇತ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ನೃತ್ಯ ಮಾಡಿದರು.
ಇದೇ ವೇಳೆ ಸ್ಟಾರ್ ನಟಿ ತಮನ್ನಾ ಭಾಟಿಯಾ ಪುಷ್ಪಾ ಚಿತ್ರದ ಊ ಅಂಟಾವಾ ಸೇರಿದಂತೆ ಕೆಲ ಹಾಡುಗಳಿಗೆ ಹೆಜ್ಜೆ ಹಾಕಿ ಮನರಂಜನೆ ನೀಡಿದರು.
ಮನರಂಜನಾ ಕಾರ್ಯಕ್ರಮದ ನಂತರ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮೊದಲ ಪಂದ್ಯ ಆರಂಭವಾಯಿತು.
ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಚೆನ್ನೈ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವಂತೆ ಆಹ್ವಾನಿಸಿದರು. ಚೆನ್ನೈ ನೀಡಿದ 179 ರನ್ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 5 ವಿಕೆಟ್ ಗಳಿಂದ ಪಂದ್ಯ ಗೆದ್ದುಕೊಂಡಿತು.
—-
Be the first to comment