ಬುಕ್ ಮೈ ಶೋನಲ್ಲಿ ‘ಡೆವಿಲ್’ ವಿಮರ್ಶೆಗೆ ತಡೆ

ದರ್ಶನ್ ಅಭಿನಯದ ದಿ ಡೆವಿಲ್ ಚಿತ್ರದ ರೇಟಿಂಗ್ ಮತ್ತು ವಿಮರ್ಶೆಗಳನ್ನು ಬುಕ್ ಮೈ ಶೋನಲ್ಲಿ  ಕೊಡುವುದಕ್ಕೆ ಬ್ರೇಕ್ ಹಾಕಲಾಗಿದೆ.

ನ್ಯಾಯಾಲಯದ ಆದೇಶಕ್ಕೆ ಕಾರಣ ಏನೆಂಬುದು ಸದ್ಯಕ್ಕೆ ಲಭ್ಯವಾಗದಿದ್ದರೂ,  ವೈಯಕ್ತಿಕ ಧ್ವೇಷದಿಂದಾಗಿ ನೆಗೆಟಿವ್ ವಿಮರ್ಶೆ ಕೊಡುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದ  ಬುಕ್ ಮೈ ಶೋನಲ್ಲಿ ರೇಟಿಂಗ್ ಕೊಡುವುದಕ್ಕೆ ಬ್ರೇಕ್ ಹಾಕಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಯಾವುದೇ ಚಿತ್ರವನ್ನು ನೋಡಿದ ಬಳಿಕ ಬುಕ್ ಮೈ ಶೋ ಮೂಲಕ ರೇಟಿಂಗ್ ಮತ್ತು ವಿಮರ್ಶೆ ಬರೆಯಬಹುದು.  ನ್ಯಾಯಾಲಯದ ಆದೇಶದ ಪ್ರಕಾರ, ‘ದಿ ಡೆವಿಲ್’ ನ ರೇಟಿಂಗ್ ಮತ್ತು ವಿಮರ್ಶೆಗಳನ್ನು BookMyShow ನಂತಹ ಕೆಲವು ವೇದಿಕೆಗಳಲ್ಲಿ ನಿಷ್ಕ್ರಿಯಗೊಳಿಸಲಾಗಿದೆ.

ಸಿನಿಮಾ ವೀಕ್ಷಿಸಿದ ಬಳಿಕ  ಬುಕ್ ಮೈ ಶೋನಲ್ಲಿ ರೇಟಿಂಗ್ ಕೊಡಲು ಹೋದಾಗ ಈ ವಿಚಾರ ಬೆಳಕಿಗೆ ಬಂದಿದೆ. ‘ಕೋರ್ಟ್ ಆದೇಶದಂತೆ ರೇಟಿಂಗ್ ಹಾಗೂ ವಿಮರ್ಶೆಯನ್ನು ನಿಷ್ಕ್ರಿಯಗೊಳಿಸಲಾಗಿದೆ’ ಎಂದು ಆ್ಯಪ್‌ನಲ್ಲಿ ತೋರಿಸಲಾಗಿದೆ.

ದರ್ಶನ್ ಸೋದರ, ನಿರ್ದೇಶಕ ದಿನಕರ್ ತೂಗುದೀಪ ಮಾತನಾಡಿ, ‘ನೆಗೆಟಿವ್ ವಿಮರ್ಶೆ ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ಅದನ್ನು ಆಫ್ ಮಾಡಿಸಿದ್ದೇವೆ. ದುಡ್ಡು ಕೊಟ್ಟು ರೇಟಿಂಗ್ ಮಾಡಿಸೋ ಕೆಲಸ ಆಗುತ್ತಿದೆ. ಈ ಮೂಲಕ ಸಿನಿಮಾ ಸಂಸ್ಕೃತಿಯನ್ನು ಹಾಳು ಮಾಡುವ ಕೆಲಸ ಆಗುತ್ತಾ ಇದೆ. ನನ್ನ ರಾಯಲ್ ಸಿನಿಮಾಗೂ ಇದೇ ಅನುಭವ ಆಗಿದೆ. ಆಗ ಬೇಕೆಂದೇ ಸಿನಿಮಾಗೆ ನೆಗೆಟಿವ್ ವಿಮರ್ಶೆ ಕೊಡಿಸಿದ್ದರು. ಅದಕ್ಕೆ ಈ ನಿರ್ಧಾರ’ ಎಂದು ಹೇಳಿದ್ದಾರೆ.

ಕೆಲವು ಅಧಿಕೃತ ವೇದಿಕೆಗಳಲ್ಲಿ ರೇಟಿಂಗ್‌ಗಳು ಮತ್ತು ವಿಮರ್ಶೆಗಳನ್ನು ನಿಷ್ಕ್ರಿಯಗೊಳಿಸಲಾಗಿದ್ದರೂ ,  ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರೇಕ್ಷಕರು ಡೆವಿಲ್ ಚಿತ್ರಕ್ಕೆ  ತಮ್ಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!