ರವಿಕೆಯ ಕುರಿತಾದ ” ರವಿಕೆ ಪ್ರಸಂಗ” ಎಂಬ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ.
“ಬ್ರಹ್ಮ ಗಂಟು” ಧಾರಾವಾಹಿ ಖ್ಯಾತಿಯ ಗೀತಾಭಾರತಿ ಭಟ್, ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಸುನನ್ ರಂಗನಾಥ್, ಪದ್ಮಜಾರಾವ್, ರಘು ಪಾಂಡೇಶ್ವರ್ ಹೀಗೆ ಸಾಕಷ್ಟು ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ವಿನಯ್ ಶರ್ಮ ಸಂಗೀತ ನಿರ್ದೇಶನ, ಮುರಳಿಧರ್ ಎನ್ ಛಾಯಾಗ್ರಹಣ ಹಾಗೂ ರಘು ಶಿವರಾಮ್ ಸಂಕಲನವಿರುವ “ರವಿಕೆ ಪ್ರಸಂಗ” ಚಿತ್ರದ ಮೊದಲ ಪ್ರತಿ ಸದ್ಯದಲ್ಲೇ ಬರಲಿದೆ. ವಿಭಿನ್ನ ಕಥೆಯ ಈ ಚಿತ್ರ ಎಲ್ಲರಿಗೂ ಹಿಡಿಸಲಿದೆ ಎಂದು ನಿರ್ದೇಶಕ ಸಂತೋಷ್ ಕೊಡೆಂಕೆರಿ ಹೇಳಿದ್ದಾರೆ.
ಪ್ರತಿಯೊಬ್ಬ ಹೆಣ್ಣುಮಕ್ಕಳಿಗೆ ರವಿಕೆ ಮೇಲೆ ಪ್ರೀತಿ. ಅದರ ಅಳತೆ ಸರಿಯಾಗಿರಬೇಕು ಎಂದು ಸಾಕಷ್ಟು ಸಲ ಟೈಲರ್ ಜೊತೆ ಚರ್ಚಿಸುತ್ತಾರೆ. ಈ ರೀತಿ ಮಹಿಳೆ ಹಾಗೂ ಟೈಲರ್ ನಡುವೆ ರವಿಕೆಗಾಗಿ ನಡಯುವ ಮುಖ್ಯ ವಿಷಯವೇ “ರವಿಕೆ ಪ್ರಸಂಗ” . ಸಂಭಾಷಣೆ ಮಂಗಳೂರು ಕನ್ನಡದಲ್ಲಿರುತ್ತದೆ. ಎಲ್ಲರ ಮನಸ್ಸಿಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ಈ ಚಿತ್ರ ಪ್ರಿಯವಾಗಲಿದೆ ಎಂದು ನಾಯಕಿ ಗೀತಾಭಾರತಿ ಭಟ್ ತಿಳಿಸಿದ್ದಾರೆ.
ಕಥೆ ಹಾಗೂ ಸಂಭಾಷಣೆ ಪಾವನ ಸಂತೋಷ್, ಛಾಯಾಗ್ರಹಕ ಮುರಳಿಧರ್ ಎನ್, ಸಂಗೀತ ನಿರ್ದೇಶಕ ವಿನಯ್ ಶರ್ಮ ಅವರದ್ದು ಆಗಿದೆ.
ಚಿತ್ರ ಜೂನ್ ನಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ. ಪ್ರಚಾರದ ಮೊದಲ ಹೆಜ್ಜೆಯಾಗಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
—–
Be the first to comment