ಕರಿಯ

ಆಗಸ್ಟ್ 30ರಂದು ಕರಿಯ ರೀ ರಿಲೀಸ್

ಆಗಸ್ಟ್ 30ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಹಿಟ್ ಚಿತ್ರ ಕರಿಯ  ರೀ ರಿಲೀಸ್ ಆಗುತ್ತಿದೆ.

2003 ಜನವರಿ 3ರಂದು ತೆರೆಕಂಡಿದ್ದ ಪ್ರೇಮ್ ನಿರ್ದೇಶನದ ಕರಿಯ ಚಿತ್ರ 700ಕ್ಕೂ ಹೆಚ್ಚು ದಿನಗಳ ಕಾಲ ಪ್ರದರ್ಶನಗೊಳ್ಳುವ ಮೂಲಕ ಹೊಸ ದಾಖಲೆ ಸೃಷ್ಟಿಸಿತ್ತು. ರೌಡಿಸಂ ಹಾಗೂ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ದರ್ಶನ್ ಗೆ ಜೋಡಿಯಾಗಿ ಅಭಿನಯಶ್ರೀ ಅಭಿನಯಿಸಿದ್ದಾರೆ.

ಉಳಿದಂತೆ ಚಿತ್ರದಲ್ಲಿ ಮೈಕೋ ನಾಗರಾಜ್, ಉಮೇಶ್ ಪುಂಗ, ನಂದಕಿಶೋರ್, ದಶಾವರ ಚಂದ್ರು, ನಂದೀಶ್, ಬೀ ಜಯಶ್ರೀ, ಫೈವ್ ಸ್ಟಾರ್ ಗಣೇಶ್ ಹಾಗೂ ಸುರೇಶ್ ಶರ್ಮಾ ಬಣ್ಣ ಹಚ್ಚಿದ್ದಾರೆ. ಗುರುಕಿರಣ್ ಸಂಗೀತ ಸಂಯೋಜನೆ ನೀಡಿದ್ದು, ಸಂತೋಷ್ ಎಂಟರ್ಪ್ರೈಸಸ್ ಬ್ಯಾನರ್ ನಲ್ಲಿ ಆನೇಕಲ್ ಬಾಲರಾಜು ಚಿತ್ರ ನಿರ್ಮಾಣ ಮಾಡಿದ್ದಾರೆ.

ಕರಿಯ ರೀ ರಿಲೀಸ್ ಬಗ್ಗೆ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಕನ್ನಡದ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಖ್ಯಾತಿ ಪಡೆದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಜೈಲು ಪಾಲಾಗಿದ್ದು, ಅವರ ಅಭಿಮಾನಿಗಳಿಗೆ ಬೇಸರ ತಂದಿದೆ. ಇದರ ಬೆನ್ನಲ್ಲೇ ಕರಿಯ ರೀ ರಿಲೀಸ್ ಆಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!