ನಟ ನಾನಾ ಪಾಟೇಕರ್ ಅವರ ಹಠಾತ್ ನಿಧನಕ್ಕೆ ತೀವ್ರ ಹೃದಯಾಘಾತ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ದೃಢಪಟ್ಟಿದೆ.
ನಾನಾ ಪಾಟೇಕರ್ ಅಕ್ಟೋಬರ್ 8ರಂದು ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದರು. ಅವರ ಅಗಲಿಕೆಯಿಂದ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಇದೀಗ ಸಾವಿನ ಕಾರಣ ಕುರಿತು ವೈದ್ಯಕೀಯ ವರದಿಯ ವಿವರಗಳು ಬಹಿರಂಗವಾಗಿವೆ.
ನಾನಾ ಪಾಟೇಕರ್ ಅವರ ಹೃದಯಕ್ಕೆ ರಕ್ತ ಪೂರೈಸುವ ಪ್ರಮುಖ ರಕ್ತನಾಳದಲ್ಲಿ ಅಡಚಣೆ ಉಂಟಾಗಿ ಅದು ಸಂಪೂರ್ಣವಾಗಿ ಬ್ಲಾಕ್ ಆಗಿತ್ತು ಎಂದು ವರದಿ ತಿಳಿಸಿದೆ. ಇದರಿಂದ ತೀವ್ರ ಹೃದಯಾಘಾತ ಸಂಭವಿಸಿದೆ. ಅವರ ಸಾವು ಸ್ವಾಭಾವಿಕ ಎಂದು ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅಕ್ಟೋಬರ್ 8ರಂದು ಮುಂಜಾನೆ ನಾನಾ ಪಾಟೇಕರ್ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಅವರ ವಾರ್ಡನ್ ಖಾಸಗಿ ಆಸ್ಪತ್ರೆ ಸಂಪರ್ಕಿಸಿ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದರು. ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ಮೂಲಕ ಅವರನ್ನು ಬದುಕಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ.ಬೆಳಿಗ್ಗೆ 5.10ರ ಸುಮಾರಿಗೆ ನಾನಾ ಪಾಟೇಕರ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಪರೀಕ್ಷೆಗಾಗಿ ಮೃತದೇಹವನ್ನು ಗೋವಾ ವೈದ್ಯಕೀಯ ಕಾಲೇಜಿಗೆ ಕೊಂಡೊಯ್ಯಲಾಯಿತು. ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಅವರ ಪುತ್ರ ಮಲ್ಹಾರ್ ಪಾಟೇಕರ್ ಮೃತದೇಹವನ್ನು ಮಹಾರಾಷ್ಟ್ರಕ್ಕೆ ಕರೆದೊಯ್ದರು.
ನಾನಾ ಪಾಟೇಕರ್ ಅವರ ಸಾವಿನ ಬಳಿಕ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
—





Be the first to comment