ದಾಖಲೆ ನಿರ್ಮಿಸಿದ ಭಜರಂಗಿ2

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಚಿತ್ರ, ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಓಟಿಟಿಯಲ್ಲಿ ಬಿಡುಗಡೆಯಾದ ಮೂರು ದಿನದಲ್ಲಿ ಅತೀ ಹೆಚ್ಚು ವೀಕ್ಷಣೆ ಕಂಡ ಮೊದಲ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

Zee5ನಲ್ಲಿ ಭಜರಂಗಿ 2 ಚಿತ್ರ ಬಿಡುಗಡೆಯಾದ ಮೂರು ದಿನದಲ್ಲಿ ಭರ್ಜರಿ 5 ಕೋಟಿ ನಿಮಿಷಗಳ ವೀಕ್ಷಣೆ ಪಡೆದಿದೆ. ಓಟಿಟಿಯಲ್ಲಿ ಇಷ್ಟು ಕಡಿಮೆ ಅವಧಿಯಲ್ಲಿ ಬೃಹತ್ ವೀಕ್ಷಣೆ ಪಡೆದ ಮೊದಲ ಕನ್ನಡ ಚಿತ್ರ ಇದಾಗಿದೆ. ಡಿಸೆಂಬರ್ 23ರಿಂದ ‘ಭಜರಂಗಿ 2’ ಚಿತ್ರವನ್ನು ಓಟಿಟಿಯಲ್ಲಿ ಬಿಡುಗಡೆ ಮಾಡಲಾಗಿತ್ತು.

‘ಭಜರಂಗಿ 2’ ಚಿತ್ರ ಚಿತ್ರಮಂದಿರದಲ್ಲಿ ಬಿಡುಗಡೆಯಾದ ದಿನವೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಿಧನ ಆಗಿದ್ದರು. ಇದರಿಂದ ಚಿತ್ರಪ್ರದರ್ಶನವನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಈಗ ಓಟಿಟಿಯಲ್ಲಿ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಬಂದಿದೆ.

ಹರ್ಷ ಮತ್ತು ಶಿವಣ್ಣ ಕಾಂಬಿನೇಷನ್‌ನಲ್ಲಿ ತಯಾರಾದ ಭಜರಂಗಿ ಮತ್ತು ವಜ್ರಕಾಯ ಸಿನಿಮಾ ಬಳಿಕ ಭಜರಂಗಿ 2 ಚಿತ್ರ ತೆರೆಗೆ ಬಂದಿದೆ. ಶಿವಣ್ಣಗೆ ನಾಯಕಿಯಾಗಿ ಭಾವನಾ ಮೆನನ್ ಕಾಣಿಸಿಕೊಂಡಿದ್ದಾರೆ. ಭಾವನಾ ಟಗರು ಸಿನಿಮಾದ ಬಳಿಕ ಶಿವಣ್ಣ ಜೊತೆ ಚಿತ್ರದಲ್ಲಿ ನಟಿಸಿದ್ದಾರೆ.

ಜಯಣ್ಣ-ಬೋಗೇಂದ್ರ ನಿರ್ಮಾಣದಲ್ಲಿ ಭಜರಂಗಿ-2 ಸಿನಿಮಾ ತೆರೆಗೆ ಬಂದಿದೆ. 2013ರಲ್ಲಿ ತೆರೆಗೆ ಬಂದ ಭಜರಂಗಿ ಸಿನಿಮಾದ ಎರಡನೇ ಭಾಗ ಇದಾಗಿದೆ. ಮೊದಲ ಚಿತ್ರದಲ್ಲಿ ನಟಿ ಐಂದ್ರಿತಾ ರೇ ನಾಯಕಿಯಾಗಿ ನಟಿಸಿದ್ದರು. ಎರಡನೇ ಭಾಗದಲ್ಲಿ ಶಿವಣ್ಣ ಅವರಿಗೆ ಭಾವನಾ ಮೆನನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!