ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಜನ ಆರೋಪಿಗಳಿಗೆ ಜಾಮೀನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಸದ್ಯ ಸುಪ್ರೀಂ ಕೋರ್ಟ್ಗೆ ಬೇಸಿಗೆ ರಜೆ ಇದ್ದು ಜುಲೈ 14ಕ್ಕೆ ರಜೆ ಅಂತ್ಯವಾಗಲಿದೆ. ಬಳಿಕ ವಿಚಾರಣೆ ನಡೆಸೋದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಅಲ್ಲಿಯವರೆಗೆ ದರ್ಶನ್ ಗ್ಯಾಂಗ್ ಗೆ ರಿಲೀಫ್ ನೀಡಿದೆ. ವಿಚಾರಣೆ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟ ಆಗಲಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ 5 ತಿಂಗಳಿಗೂ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿ ಹೊರಗೆ ಬಂದಿದ್ದಾರೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಪ್ರಕರಣ ಸಂಬಂಧ ನಿನ್ನೆ ವಿಚಾರಣೆ ನಡೆಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ವಿಚಾರಣೆ ಮುಂದೂಡಿ ಜುಲೈ 10ಕ್ಕೆ ಎಲ್ಲಾ 17 ಆರೋಪಿಗಳು ಹಾಜರಾಗುವಂತೆ ಸೂಚನೆ ಕೊಟ್ಟಿದೆ. ಕಳೆದ ಬಾರಿ ಬೆನ್ನು ನೋವಿನ ನೆಪ ಹೇಳಿ ಕೋರ್ಟ್ ಗೆ ದರ್ಶನ್ ಗೈರಾಗಿದ್ದರು.
—–





Be the first to comment