ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ನಟ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳ ಜಾಮೀನು ಅರ್ಜಿಯ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್ ಮುಂದಿನ ವಾರಕ್ಕೆ ಕಾಯ್ದಿರಿಸಿದೆ.
ದರ್ಶನ್‌ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವಾದ-ಪ್ರತಿವಾದವನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಪವಿತ್ರಾ ಗೌಡ , ದರ್ಶನ್ , ಪ್ರದೂಷ್ , ಲಕ್ಷ್ಮಣ್ , ನಾಗರಾಜ್ , ಅನುಕುಮಾರ್ , ಜಗದೀಶ್ ಈ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್ ಮೆಟ್ಟಿಲೇರಿತ್ತು. ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಮಧ್ಯಂತರ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಅವರಿಗೆ ಜಾಮೀನು ದೊರೆತಿತ್ತು. ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು.
ದರ್ಶನ್ ಸದ್ಯ ಥೈಲ್ಯಾಂಡ್‌ನಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್‌ಗಾಗಿ ಬೀಡುಬಿಟ್ಟಿದ್ದಾರೆ. ಸಾಂಗ್ ಶೂಟಿಂಗ್ ನಡುವೆಯೇ ಪಾರ್ಟಿ ಮೋಜು ಮಸ್ತಿ ಮಾಡುತ್ತಾ ದರ್ಶನ್ ಎಂಜಾಯ್ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಸದ್ಯ ಡೆವಿಲ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ಶೀಘ್ರದಲ್ಲೇ ರಿಲೀಸ್ ಡೇಟ್ ಘೋಷಣೆಯಾಗಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ದರ್ಶನ್ ಗೆಳತಿ ಪವಿತ್ರಾಗೌಡಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್ ಕಳಿಸಿದ್ದನೆಂದು ಆತನನ್ನು ದರ್ಶನ್ ಗ್ಯಾಂಗ್ ಕಿಡ್ನಾಪ್ ಮಾಡಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿತ್ತು. ಕೊಲೆ ಪ್ರಕರಣದಡಿ ಜೂನ್ 11ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿತ್ತು. ದರ್ಶನ್ ಆರು ತಿಂಗಳು ಸೆರೆಮನೆವಾಸ ಅನುಭವಿಸಿದ್ದರು.





Be the first to comment