ಆದಾಯ ತೆರಿಗೆ ಪ್ರಕರಣ: ಯಶ್ ಗೆ ರಿಲೀಫ್

ರಾಕಿಂಗ್ ಸ್ಟಾರ್ ಯಶ್ ಅವರಿಗೆ ಆದಾಯ ತೆರಿಗೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್  ಬಿಗ್ ರಿಲೀಫ್ ನೀಡಿದೆ.

2013-14ರಿಂದ 2018-19 ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸ್ ನ್ನು ಯಶ್ ಹೈಕೋರ್ಟ್​ ನಲ್ಲಿ ಪ್ರಶ್ನೆ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ನ್ಯಾಯಪೀಠ ನೋಟಿಸ್ ನ್ನು ರದ್ದು ಮಾಡಿದೆ.

ಹೊಂಬಾಳೆ ಕನ್ಸ್​​​ಟ್ರಕ್ಷನ್ಸ್​ಗೆ ಸಂಬಂಧಿಸಿ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಯಶ್ ವಾಸಿಸಿದ್ದ ಹೊಸಕೆರೆಹಳ್ಳಿ ಮನೆ, ಅವರು ಬಾಡಿಗೆ ಪಡೆದು ಉಳಿದುಕೊಂಡಿದ್ದ ತಾಜ್ ವೆಸ್ಟ್ ಎಂಡ್​ ರೂಮ್ ಶೋಧಿಸಿತ್ತು. 2021ರಲ್ಲಿ  ಯಶ್​​ಗೆ ಆದಾಯ ತೆರಿಗೆ ಕಾಯ್ದೆ ಸೆ.153ಸಿ ಅಡಿ ನೋಟಿಸ್ ನೀಡಿತ್ತು. ಮನೆ ಶೋಧಿಸಿದ ಬಳಿಕವೂ ‘ಶೋಧನೆ ನಡೆಸದ ವ್ಯಕ್ತಿ’ ಎಂದು ಪರಿಗಣಿಸಿ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು ಏಕೆ ಎಂದು ಪ್ರಶ್ನಿಸಿ  ಯಶ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

‘ತಮ್ಮ ನಿವಾಸ ಶೋಧಿಸಲಾಗಿದೆ. ಆದರೂ ಶೋಧ ನಡೆಸದೇ ಇರುವವರಿಗೆ ನೀಡುವ 153ಸಿ ನೋಟಿಸ್ ನೀಡಲಾಗಿದೆ. ಇದು ಕಾನೂನು ಬಾಹಿರ’ ಎಂದು ಯಶ್ ಪರ ವಕೀಲರು ವಾದಿಸಿದ್ದಾರೆ.

ಪ್ರತಿವಾದ ಮಂಡಿಸಿದ ಆದಾಯ ತೆರಿಗೆ ಇಲಾಖೆ, ‘ಹೊಂಬಾಳೆ ಕನ್ಸ್​​​ಟ್ರಕ್ಷನ್​​​​ನ ವಿಜಯ್ ಕುಮಾರ್ ವಿರುದ್ಧ ಶೋದನೆ ವಾರಂಟ್ ಪಡೆಯಲಾಗಿತ್ತು. ಹೊಂಬಾಳೆಗೆ ಸಂಬಂಧಪಟ್ಟಂತೆ ಮಾತ್ರ ಯಶ್ ನಿವಾಸದಲ್ಲಿ ಶೋಧಿಸಲಾಗಿದೆ. ಹೀಗಾಗಿ ಯಶ್ ಶೋಧನೆಗೊಳಗಾದ ವ್ಯಕ್ತಿಯಲ್ಲ’ ಎಂದು ವಾದ ಮಾಡಿದೆ.

ವಾದ- ಪ್ರತಿವಾದ ಗಮನಿಸಿ  ಹೈಕೋರ್ಟ್ ಯಶ್​​ಗೆ ಐಟಿ ಇಲಾಖೆ ಜಾರಿಗೊಳಿಸಿದ್ದ ನೋಟಿಸ್​  ರದ್ದು ಮಾಡಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!