ರೀರೆಕಾರ್ಡಿಂಗ್ ಮುಗಿಸಿದ ಅರ್ಜುನ್ ಗೌಡ

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅದ್ದೂರಿ ಚಿತ್ರಗಳನ್ನು ನಿರ್ಮಿಸಿ ಹೆಸರಾದವರು ನಿರ್ಮಾಪಕ ರಾಮು. ರಾಮು ಫಿಲಂಸ್ ಲಾಂಛನದಲ್ಲಿ ರಾಮು ಅವರು ನಿರ್ಮಿಸುತ್ತಿರುವ ಮತ್ತೊಂದು ಅಪಾರ ವೆಚ್ಚದ, ಅದ್ದೂರಿ ಸಿನಿಮಾ ಅರ್ಜುನ್ ಗೌಡ . ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ಈ ಚಿತ್ರದ ರೀರೆಕಾರ್ಡಿಂಗ್  ಪೂರ್ಣಗೊಂಡಿದೆ.

ಬೆಂಗಳೂರು, ಮುಂಬೈ,  ಚೆನ್ನೈ ಹಾಗೂ ಕೊಲ್ಕತ್ತ ನಗರಗಳ ಪ್ರಸಿದ್ದ ಸ್ಟುಡಿಯೋಗಳಲ್ಲಿ ಈ ಚಿತ್ರದ ರೀರೆಕಾರ್ಡಿಂಗ್ ‌ ನಡೆದಿರುವುದು ವಿಶೇಷ. 200ಕ್ಕೂ ಹೆಚ್ಚು ತಂತ್ರಜ್ಞರ ಪಾಲ್ಗೊಳುವಿಕೆಯಲ್ಲಿ ರೀರೆಕಾರ್ಡಿಂಗ್ ನಡೆದಿದೆ. ಧರ್ಮವಿಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಸಿ.ಜಿ‌ ಕೆಲಸ ಕೂಡ ಮುಕ್ತಾಯವಾಗಿದ್ದು, ಬೆಂಗಳೂರಿನ ಖ್ಯಾತ ಅನಿಮಂತ್ರ ಸಂಸ್ಥೆ ಯವರು‌ ಸಿ.ಜೆ ವರ್ಕ್ ನ ಉಸ್ತುವಾರಿ ವಹಿಸಿದ್ದರು. 80ಕ್ಕೂ ಹೆಚ್ಚು ನುರಿತ ತಂತ್ರಜ್ಞರು ಸಿ ಜಿ ವರ್ಕ್ ನಲ್ಲಿ ಭಾಗವಹಿಸಿದ್ದರು. ದಕ್ಷಿಣ ಭಾರತದ ಖ್ಯಾತ ಕಲಾವಿದರ ಚಿತ್ರಗಳಿಗೆ ಡಿ ಐ ಕೆಲಸ ಮಾಡಿರುವ ಚೆನ್ನೈನ igene ಸಂಸ್ಥೆಯವರು ಅರ್ಜುನ್ ಗೌಡ ಚಿತ್ರಕ್ಕೂ ‌ಡಿ ಐ ಮಾಡಿದ್ದಾರೆ.

ಸದ್ಯದಲ್ಲೇ ಸೆನ್ಸಾರ್ ಮುಂದೆ ಹಾಜರಾಗಲಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಸಿಂಗಾಪುರದಲ್ಲಿ ನಡೆದಿದೆ. ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳಿದೆ. ಮಾಸ್ ಮಾದ ಮೂಡಿ ಬಂದಿರುವ ಈ ಆಕ್ಷನ್ ಸನ್ನಿವೇಶಗಳು. ನೋಡುಗರ ಮೈ ಜುಂ ಎನಿಸುತ್ತದೆ.
ಈಗಾಗಲೇ ಈ ಚಿತ್ರದ ಆಕ್ಷನ್ ಟ್ರೇಲರ್ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಪ್ರಜ್ವಲ್ ದೇವರಾಜ್  ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಸಿನಿಮಾವನ್ನು ನಿಗದಿತ ಸಮಯ ನೋಡಿಕೊಂಡು ಬಿಡುಗಡೆ ಮಾಡುವ ಆಶಯ ನಿರ್ಮಾಪಕರದು.
ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಬಾಲಿವುಡ್ ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!