Richhi: ‘ರಿಚ್ಚಿ’ ಶೂಟಿಂಗ್‌ ಮುಕ್ತಾಯ

ನಿರ್ದೇಶಕ ಹೇಮಂತ್ ಕುಮಾರ್ ಅವರ ‘ರಿಚ್ಚಿ’ ಚಿತ್ರದ ಚಿತ್ರೀಕರಣ ಮುಕ್ತಾಯ ಆಗಿದೆ.

ಸಸ್ಪೆನ್ಸ್ ಥ್ರಿಲ್ಲರ್ ಎಂದು ಹೇಳಲಾಗಿರುವ ಈ ಚಿತ್ರ ಪ್ರೇಮಕಥೆಯನ್ನು ಹೊಂದಿದೆ. ಚಿತ್ರದಲ್ಲಿ ಹೇಮಂತ್ ನಾಯಕನ ಪಾತ್ರವನ್ನು ನಿರ್ವಹಿಸಿದ್ದಾರೆ. ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.

ಹೇಮಂತ್ ಅವರು ಮೇ 18ರಂದು ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲು ಉತ್ಸುಕರಾಗಿದ್ದಾರೆ. ಘೌಷ್ ಪೀರ್ ಅವರ ಸಾಹಿತ್ಯ, ಅಗಸ್ತ್ಯ ಸಂತೋಷ್ ಅವರ ಸಂಗೀತ ಸಂಯೋಜನೆಯ ಹಾಡಿಗೆ ಗಾಯಕ ಕುನಾಲ್ ಗಾಂಜಾವಾಲಾ ಧ್ವನಿ ನೀಡಿದ್ದಾರೆ.

‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಮೋಲಾ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಅಜಿತ್ ಕುಮಾರ್ ಅವರ ಛಾಯಾಗ್ರಹಣ ಮತ್ತು ಅರ್ಜುನ್ ಕಿಟ್ಟಿ ಅವರ ಸಂಕಲನವಿದೆ. ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಮತ್ತು ಡಿಫರೆಂಟ್ ಡ್ಯಾನಿ , ಹಿರಿಯ ನೃತ್ಯ ನಿರ್ದೇಶಕರಾದ ಚಿನ್ನಿ ಪ್ರಕಾಶ್, ಧನಂಜಯ ಮತ್ತು ಭೂಷಣ್ ಕೆಲಸ ಮಾಡಿದ್ದಾರೆ.

ರಿಚ್ಚಿ ಮೊದಲ ಹಾಡು ಬಿಡುಗಡೆಯಾದ ನಂತರ ಚಿತ್ರ ಬಿಡುಗಡೆಯ ದಿನಾಂಕ ಘೋಷಣೆ ಆಗುವ ನಿರೀಕ್ಷೆಯಿದೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!