ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್, ಮುಂಬೈ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ 60 ಕೋಟಿ ರೂ.ವಂಚನೆ ಆರೋಪ ಕೇಳಿಬಂದಿರುವುದು ಈ ದಾಳಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಮುಂಬೈ ಮೂಲದ ಉದ್ಯಮಿ ದೀಪಕ್ ಕೊಠಾರಿ ಅವರು ಸ್ಟಾರ್ ದಂಪತಿಯಿಂದ ತಮಗೆ ವಂಚನೆ ಆಗಿದೆ ಎಂದು ದೂರು ದಾಖಲಿಸಿದ್ದರು. ಈ ದೂರು ದಾಖಲಾದ ತಕ್ಷಣ ಆದಾಯ ತೆರಿಗೆ ಇಲಾಖೆ ತನಿಖೆಗೆ ಮುಂದಾಗಿದೆ.
ಡಿಸೆಂಬರ್ 17ರಂದು ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ‘ಬಾಸ್ಟಿಯನ್ ಗಾರ್ಡನ್ ಸಿಟಿ’ ಪಬ್ ಸೇರಿದಂತೆ ಹಲವು ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಪಬ್ ಬೆಂಗಳೂರಿನ ಅತ್ಯಂತ ದುಬಾರಿ ಪಬ್ ಗಳಲ್ಲಿ ಒಂದಾಗಿದೆ. ಮುಂಬೈ ಮೂಲದ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ಹಲವು ಪ್ರಮುಖ ಹಣಕಾಸು ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದೆ. ಗುರುವಾರ ಮುಂಬೈಯಲ್ಲಿರುವ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಟಿ ದಾಳಿಯ ನಿಖರ ಕಾರಣ ಹಾಗೂ ಮುಂದಿನ ಕ್ರಮಗಳ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ವಂಚನೆ ಪ್ರಕರಣದ ಬಗ್ಗೆ ಆದಾಯ ತೆರಿಗೆ ಇಲಾಖೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸುತ್ತಿದೆ.
—-





Be the first to comment