ಬೆಂಗಳೂರಿನ ಬೃಹತ್ ರಿಂಗ್ ರಸ್ತೆಗೆ ಪುನೀತ್ ರಾಜ್ ಕುಮಾರ್ ಅವರ ಹೆಸರು ನಾಮಕರಣ ಮಾಡಲು ನಿರ್ಧಾರ ಮಾಡಲಾಗಿದೆ.
ಕಂಠೀರವ ಸ್ಟುಡಿಯೋ ಔಟರ್ ರಿಂಗ್ ರೋಡ್‌ಗೆ ಅಪ್ಪು ಹೆಸರು ಇಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಆಶೋಕ್ ತಿಳಿಸಿದ್ದಾರೆ.
ಖಾಸಗಿ ಕಾರ್ಯಕ್ರಮದ ವೇಳೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಆರ್.ಅಶೋಕ್ ಅವರು ರಿಂಗ್ ರೋಡ್‌ಗೆ ಅಪ್ಪು ಹೆಸರು ನಾಮಕರಣ ಮಾಡುವ ವಿಚಾರವನ್ನು ರಿವೀಲ್ ಮಾಡಿದ್ದಾರೆ.
ನ.1ರಂದು ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಸರಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತ್ತು.
ಇತ್ತೀಚೆಗೆ ಗಂಧದಗುಡಿ ಸಿನಿಮಾ ರಿಲೀಸ್ ಆಗಿದ್ದು ಸಿನಿಮಾ ವ್ಯಾಪಕ ಮೆಚ್ಚುಗೆ ಗಳಿಸುತ್ತಿದೆ.
___

Be the first to comment