ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಪ್ರಶಾಂತ್ ನೀಲ್ ಅವರ ಮುಂಬರುವ ಆ್ಯಕ್ಷನ್ ಡ್ರಾಮಾ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ.
ಚಿತ್ರಕ್ಕೆ ಡ್ರ್ಯಾಗನ್ ಎಂದು ಹೆಸರಿಡಲಾಗಿದೆ. ವರದಿಗಳ ಪ್ರಕಾರ ಜೂನಿಯರ್ ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಅವರ ಮುಂಬರುವ ಆ್ಯಕ್ಷನ್ ಡ್ರಾಮಾ ಚಿತ್ರಕ್ಕೆ ಹೆಚ್ಚಿನ ಸ್ಟಾರ್ ಪವರ್ ಸೇರ್ಪಡೆಯಾಗುತ್ತಿದೆ. ರಿಷಬ್ ಮತ್ತು ಜೂನಿಯರ್ ಎನ್‌ಟಿಆರ್ ಇಬ್ಬರೂ ಸ್ನೇಹಿತರಾಗಿದ್ದಾರೆ. ಈ ಸುದ್ದಿಯ ಬಗ್ಗೆ ಅಧಿಕೃತ ದೃಢೀಕರಣ ಬಾಕಿ ಇದೆ. ಅನಿಲ್ ಕಪೂರ್ ಕೂಡ ಈ ಚಿತ್ರದ ಭಾಗವಾಗಿದ್ದಾರೆ ಎಂಬ ವರದಿಗಳು ಕೇಳಿ ಬಂದಿವೆ.
ಇತ್ತೀಚೆಗಷ್ಟೇ ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ನಾಯಕಿಯಾಗಿ ಚಿತ್ರತಂಡ ಸೇರಿದ್ದಾರೆ ಎಂದು ವರದಿಯಾಗಿತ್ತು. ಆಕ್ಷನ್ ಡ್ರಾಮಾ ಡ್ರ್ಯಾಗನ್ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್, ಎನ್‌ಟಿಆರ್ ಆರ್ಟ್ಸ್ ಸಹಯೋಗದೊಂದಿಗೆ ಬೃಹತ್ ಕ್ಯಾನ್ವಾಸ್‌ನಲ್ಲಿ ನಿರ್ಮಿಸುತ್ತಿದೆ.
ಚಿತ್ರ ಮುಂದಿನ ವರ್ಷ ಜೂನ್ 25 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.
ಸಂಗೀತ ನಿರ್ದೇಶನ ರವಿ ಬಸ್ರೂರ್, ಭುವನ್ ಗೌಡ ಅವರು ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ. ನಿರ್ಮಾಣ ವಿನ್ಯಾಸದ ಜವಾಬ್ದಾರಿಯನ್ನು ಚಲಪತಿ ಹೊಂದಿದ್ದಾರೆ.
—-





Be the first to comment