‘ಕೆರಾಡಿ ಸ್ಟುಡಿಯೋಸ್’ ಕಡೆಗೆ ಶೆಟ್ಟರ ಚಿತ್ತ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ರಿಷಬ್ ಶೆಟ್ಟಿ ಅವರು ಸಿನಿಮಾಗಳ ಪ್ರಚಾರ ಹಾಗೂ ಅದಕ್ಕೆ ಸಂಬಂಧಿಸಿದ ಇತರ ಸೇವೆಗಳನ್ನು ನೀಡಲು ಹೊಸ ವೇದಿಕೆ ಕಟ್ಟಿದ್ದಾರೆ. ಕೆರಾಡಿ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ.

‘ಕೆರಾಡಿ ಸ್ಟುಡಿಯೋಸ್’ ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ ಎಂದು ರಿಷಬ್ ಟ್ವೀಟ್‌ ಮಾಡಿದ್ದಾರೆ.

ಅಂದ ಹಾಗೆ ಕೆರಾಡಿ ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ಕೋರಿದ್ದಾರೆ.

ರಿಷಬ್ ಶೆಟ್ಟಿ ನಟ, ನಿರ್ದೇಶಕ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಮೂರೂ ಕ್ಷೇತ್ರದಲ್ಲಿ ಅವರು ಯಶಸ್ಸು ಕಂಡಿದ್ದಾರೆ. ರಿಷಬ್ ಶೆಟ್ಟಿ ಸಿನಿಮಾಗಳ ಪ್ರಚಾರ ಹಾಗೂ ಅದಕ್ಕೆ ಸಂಬಂಧಿಸಿದ ಇತರ ಸೇವೆಗಳನ್ನು ನೀಡಲು ಹೊಸ ವೇದಿಕೆ ಕಟ್ಟಿದ್ದಾರೆ. ಅವರ ಹೊಸ ಪ್ರಯತ್ನಕ್ಕೆ ಅಭಿಮಾನಿಗಳಿಂದ ಶುಭ ಹಾರೈಕೆ ಬರುತ್ತಿವೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!