ವಿಶ್ವಸಂಸ್ಥೆಯಲ್ಲಿ ಪರಿಸರ ಸಂರಕ್ಷಣೆ ವಿಷಯವಾಗಿ ಕನ್ನಡದ ನಿರ್ದೇಶಕ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ ಮಾಡಿ ಮೆಚ್ಚುಗೆ ಪಡೆದಿದ್ದಾರೆ.
ಸರಳ ಭಾರತೀಯ ಉಡುಗೆಯಾದ ಬಿಳಿಯ ಬಣ್ಣದ ಖುರ್ತಾ, ಅದಕ್ಕೊಪ್ಪುವ ನೀಲಿ ಬಣ್ಣದ ವೇಸ್ ಕೋಟು ಧರಿಸಿದ್ದ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ ಆರಂಭಿಸಿದರು.
” ನಮಸ್ಕಾರ ನಾನು ರಿಷಬ್ ಶೆಟ್ಟಿ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ಪರಿಸರ ಸ್ವಚ್ಛತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇಶ ಎಂದು ಹೇಳಿದರು.
ಕೆಲ ದಿನಗಳ ಹಿಂದೆ ರಿಷಬ್ ಅವರು, ಸಿಎಂ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದರು. ಅನೇಕ ಕಾಡುಗಳಿಗೆ ಭೇಟಿ ನೀಡಿ, ಕಾಡಂಚಿನ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರು. ಈ ಎಲ್ಲಾ ಸಮಸ್ಯೆಗಳನ್ನ ಪರಿಹರಿಸುವುದಾಗಿ ಸಿಎಂ ಬೊಮ್ಮಾಯಿ ಅವರು ಭರವಸೆ ನೀಡಿದ್ದರು.
ಈಗ ಅವರು ವಿಶ್ವಸಂಸ್ಥೆಯಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿದ್ದಾರೆ.
___

Be the first to comment