ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಮುಂದಾಗುವ ಮೂಲಕ ಭಾರೀ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ.
ಬೆಂಗಳೂರು – ಕನಕಪುರ ರಸ್ತೆಯಲ್ಲಿ 25 ಎಕರೆ ಪ್ರದೇಶದಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವ ಉದ್ದೇಶವನ್ನು ಉಮಾಪತಿ ಶ್ರೀನಿವಾಸ್ ಹೊಂದಿದ್ದಾರೆ. ಈಗಾಗಲೇ ಕುಟುಂಬದವರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನೆರವೇರಿಸಿದ್ದು ಎಲ್ಲಾ ರೀತಿಯ ಸೌಲಭ್ಯ, ಆಧುನಿತ ತಂತ್ರಜ್ಞಾನದಿಂದ ಕೂಡಿದ ಫಿಲ್ಮ್ ಸಿಟಿ ಇದಾಗಿರಲಿದೆ.
175 ಕೋಟಿ ಬಂಡವಾಳದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡುವ ಉದ್ದೇಶವನ್ನು ಉಮಾಪತಿ ಹೊಂದಿದ್ದಾರೆ. ಫಿಲ್ಮ್ ಸಿಟಿ ಒಂದು ವರ್ಷದಲ್ಲಿ ಪೂರ್ಣಗೊಳ್ಳುವ ಯೋಜನೆ ರೂಪಿಸಲಾಗಿದೆ. ವಿದೇಶದಿಂದ ತಂತ್ರಜ್ಞರು ಆಗಮಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದಾರೆ.
ಜಮೀನ್ದಾರ ಕುಟುಂಬದ ಹಿನ್ನೆಲೆಯ ಉಮಾಪತಿ ಅವರು ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾಕ್ಕೆ ಸಹ ನಿರ್ಮಾಣ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಪ್ರವೇಶ ಮಾಡಿದರು. ಬಳಿಕ ದರ್ಶನ್ ನಟನೆಯ ರಾಬರ್ಟ್ ಚಿತ್ರವನ್ನು ನಿರ್ಮಿಸಿದ ಹೆಗ್ಗಳಿಕೆ ಇವರದ್ದಾಗಿದೆ.
ಈಗ ಉಮಾಪತಿ ಅವರು ಶ್ರೀಮುರಳಿ ನಟನೆಯ ‘ಮದಗಜ’ ಸಿನಿಮಾಕ್ಕೆ ಬಂಡವಾಳ ಹೂಡಿಕೆ ಮಾಡಿದ್ದಾರೆ.
ರಾಜ್ಯ ಸರಕಾರ ಫಿಲ್ಮ್ ಸಿಟಿ ಮಾಡುವುದಾಗಿ ಬಹಳ ವರ್ಷಗಳ ಹಿಂದೆ ಘೋಷಣೆ ಮಾಡಿದ್ದರೂ ಅದು ಇನ್ನೂ ಕಾರ್ಯಗತ ಆಗಿಲ್ಲ. ನಿರೀಕ್ಷಿತ ಸಮಯದಲ್ಲಿ
ಉಮಾಪತಿ ಒಡೆತನದ ಫಿಲ್ಮ್ ಸಿಟಿ ಪೂರ್ಣಗೊಂಡಲ್ಲಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಅನುಕೂಲ ಆಗುವ ನಿರೀಕ್ಷೆ ಹೊಂದಲಾಗಿದೆ.
Be the first to comment