‘ಆರ’ ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ, ನಿರ್ದೇಶಕ ರೋಹಿತ್ ತಮ್ಮ ಮುಂದಿನ ಚಿತ್ರಕ್ಕೆ ‘ಸಹ್ಯಾದ್ರಿ’ ಎಂದು ಹೆಸರಿಟ್ಟಿದ್ದಾರೆ.
ಚಿತ್ರವು ಆಧ್ಯಾತ್ಮಿಕ ಥ್ರಿಲ್ಲರ್ ಎನ್ನಲಾಗಿದೆ. ಚಿತ್ರದ ಶೀರ್ಷಿಕೆಯ ಟೀಸರ್ ರಿಲೀಸ್ ಮೂಲಕ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲೇ ನಿರ್ಮಾಣ ಪ್ರಾರಂಭವಾಗುವ ನಿರೀಕ್ಷೆಯಿದೆ.
‘ಸಹ್ಯಾದ್ರಿ ಚಿತ್ರ ಮೆದುಳಿನಲ್ಲಿ ಹೆಚ್ಚಿನ ಸಂಖ್ಯೆಯ ನರಕೋಶಗಳನ್ನು ಹೊಂದುತ್ತಾ ಅಕಾಲಿಕವಾಗಿ ಜನಿಸಿದ ಮಗುವಿನ ಕಥೆಯನ್ನು ಹೇಳುತ್ತದೆ. ಆ ಮಗು ಬೆಳೆದಂತೆ ಅಪಾರ ಶಕ್ತಿಗಳನ್ನು ತಡೆದುಕೊಳ್ಳುವ ಮತ್ತು ನಿಯಂತ್ರಿಸುವ ಸಾಮರ್ಥ್ಯವಿರುವ ಪ್ರಬಲ ಶಕ್ತಿಯಾಗಿ ಹೊರಹೊಮ್ಮುತ್ತದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೊಸ ಆಧ್ಯಾತ್ಮಿಕ ಥ್ರಿಲ್ಲರ್ ಚಿತ್ರ ನಿರ್ಮಿಸುವ ಗುರಿಯನ್ನು ಹೊಂದಿದ್ದೇನೆ’ ಎನ್ನುತ್ತಾರೆ ರೋಹಿತ್.
ಚಿತ್ರವನ್ನು ಮೊದಲಿಗೆ ಕನ್ನಡದಲ್ಲಿ ಚಿತ್ರೀಕರಿಸಲಾಗುವುದು. ನಂತರ ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‌ಗೆ ಡಬ್ ಮಾಡುವ ಯೋಜನೆ ಇದೆ. ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ. ಚಿತ್ರತಂಡ 2026ರ ಜುಲೈನಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದೆ.
ಚಿತ್ರಕ್ಕೆ ವಿನೋದ್ ಲೋಕಣ್ಣನವರ್ ಅವರು ಛಾಯಾಗ್ರಹಣ, ನವನಾಥ್ ವಾಸುದೇವ್ ಸಂಗೀತ ಸಂಯೋಜನೆ, ಮಾದೇಶ್ ರಾಜ್ ಸಂಕಲನ ಮತ್ತು ವಿಎಫ್‌ಎಕ್ಸ್ ಇದೆ.

Be the first to comment