ಗಣೇಶ ಹಬ್ಬಕ್ಕೆ ‘ರೋಲೆಕ್ಸ್’ ಲಿರಿಕಲ್ ವಿಡಿಯೋ ಸಾಂಗ್

ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ  “ರೋಲೆಕ್ಸ್” ಚಿತ್ರದ ಮಧುರ ಹಾಡಿನ ಲಿರಿಕಲ್ ವಿಡಿಯೋ ಸೆಪ್ಟೆಂಬರ್ 14 ರಂದು ಗಣೇಶ ಹಬ್ಬದಂದು ಬಿಡುಗಡೆಯಾಗಲಿದೆ.

ಡಾ. ವಿ.ನಾಗೇಂದ್ರ ಪ್ರಸಾದ್ ಬರೆದಿರುವ ಈ ಹಾಡನ್ನು ಜನಪ್ರಿಯ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ.

‘ಕೋಮಲ್ ಕುಮಾರ್ ಅಭಿನಯದ ಈ ಹಾಡು ಅದ್ದೂರಿಯಾಗಿ ಮೂಡಿ ಬಂದಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ   ಹಾಡಿನ ಚಿತ್ರೀಕರಣ ನಡೆದಿದೆ. ಅದ್ದೂರಿಯಾಗಿ ಮೂಡಿಬಂದಿರುವ  ಹಾಡು ಅಭಿಮಾನಿಗಳ ಮನ ಗೆಲ್ಲಲ್ಲಿದೆ. ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ’ ಎಂದು ನಿರ್ದೇಶಕ ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ.

ಮಧು ಫಿಲಂ ಸುರ್ಕ್ಯುಯಿಟ್ಸ್ ಸಂಸ್ಥೆ ಲಾಂಛನದಡಿಯಲ್ಲಿ ಅಂಬಟಿ ಮಧು ಮೋಹನ್ ನಿರ್ಮಿಸಿ  ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿರುವ ‘ರೋಲೆಕ್ಸ್’ ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಆರಂಭದಿಂದ  ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಗೆ ನಿರೀಕ್ಷೆಗೂ ಮೀರಿ ಪ್ರಶಂಸೆ ವ್ಯಕ್ತವಾಗಿದೆ.

ಸೋನಾಲ್ ಮೊಂತೆರೊ ನಾಯಕಿಯಾಗಿ ಹಾಗೂ ವಿನೋದ್ ಪ್ರಭಾಕರ್ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಅವರ ಸಂಕಲನ, ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್  ಹಾಗೂ ಮುರಳಿಕೃಷ್ಣ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!