ಕಿರಣ್ ರಾಜ್ ನಾಯಕರಾಗಿ ನಟಿಸುತ್ತಿರುವ “ರಾನಿ” ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ.
ಯಗಾದಿ ಹಬ್ಬಕ್ಕೆ ಬಿಡುಗಡೆ ಆಗಿರುವ ಪೋಸ್ಟರ್ ನಲ್ಲಿ ನಾಯಕ ಕಿರಣ್ ರಾಜ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಮಾಸ್ ಲುಕ್ ಪೋಸ್ಟರ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕಿರಣ್ ರಾಜ್ ಚಿತ್ರದಲ್ಲಿ ಭರ್ಜರಿ ಫೈಟ್ಸ್ ಮಾಡಿದ್ದಾರೆ ಎನ್ನಲಾಗಿದೆ.
ಚಿತ್ರದಲ್ಲಿ 6 ಸಾಹಸ ಸನ್ನಿವೇಶಗಳಿದೆ. “ರಾನಿ” ಚಿತ್ರಕ್ಕಾಗಿ 7 ಸೆಟ್ ಗಳನ್ನು ಹಾಕಲಾಗಿದೆ. 5 ಸೆಟ್ ಗಳಲ್ಲಿ ಚಿತ್ರಿಕರಣ ಈಗಾಗಲೇ ಮುಗಿದಿದೆ. ಶೇಕಡಾ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.
ರವಿಶಂಕರ್, ಮೈಕೋ ನಾಗರಾಜ್, ನಾಗತಿ ಹಳ್ಳಿ ಚಂದ್ರಶೇಖರ್, ಬಿ ಸುರೇಶ, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪೃಥ್ವಿರಾಜ್, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೆಂದ್ರ ಆರಸ್, ಮನಮೋಹನ್ ರೈ ಮುಂತಾದವರ ತಾರಾಬಳಗ ಚಿತ್ರಕ್ಕಿದೆ.
ಪ್ರಮೋದ್ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.
ಇದು ಆಕ್ಷನ್ ಚಿತ್ರ ಇದಾಗಿದ್ದು, ಡಿಸೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ. ಮುಂದಿನ ದಿನಗಳಲ್ಲಿ ನಾಯಕಿಯರು ಯಾರು ಎಂಬುದನ್ನು ತಿಳಿಸುತ್ತೇವೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ಹೇಳಿದ್ದಾರೆ.
ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ಅವರು ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಇದೆ.
__

Be the first to comment