rrr: ಆರ್ ಆರ್ ಆರ್ ಚಿತ್ರಕ್ಕೆ ಆಸ್ಕರ್ ಗರಿ

ಎಸ್.ಎಸ್.ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಪ್ರಶಸ್ತಿ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಕೇಳಿ ಬಂತು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್ ಟಿ ಆರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪ್ರಶಸ್ತಿ ಗೆಲುವಿಗೆ ಭಾರತೀಯ ಸಿನಿಮಾ ರಂಗದ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರುತ್ತಿದ್ದಾರೆ. ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ.

ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ.

ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗಲಿವೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!