‘ಆರ್‌ಆರ್‌ಆರ್‌’ ಚಿತ್ರ ರಿಲೀಸ್ ಡೇಟ್ ಫಿಕ್ಸ್

ರಾಜ್‍ಮೌಳಿ ನಿರ್ದೇಶನದ ಬಹುನೀರಿಕ್ಷಿತ ಆರ್‌ಆರ್‌ಆರ್‌ ಸಿನಿಮಾ ಮಾರ್ಚ್ 25ರಂದು ಬಿಡುಗಡೆ ಆಗಲಿದೆ.

ಮಾರ್ಚ್ 25ರಂದು ಚಿತ್ರ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಕೊರೊನಾ ಕಾರಣದಿಂದಾಗಿ ಬಿಡುಗಡೆ ದಿನಾಂಕವನ್ನು ಮುಂದೂಡುತ್ತಾ ಬಂದಿದ ಚಿತ್ರತಂಡ ರಿಲೀಸ್ ಡೇಟ್ ಫಿಕ್ಸ್ ಮಾಡಿದೆ.

ಆರ್‌ಆರ್‌ಆರ್‌ ಸಿನಿಮಾವು ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಅದು ಸಾಧ್ಯವಾಗಲಿಲ್ಲ. ಜೂನಿಯರ್ ಎನ್‍ಟಿಆರ್ ಮತ್ತು ರಾಮ್ ಚರಣ್ ಅಭಿನಯದ ಆರ್‌ಆರ್‌ಆರ್‌ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಮಾರ್ಚ್ 18ರಂದು ಸಿನಿಮಾವನ್ನು ತೆರೆಗೆ ತರಲು ರಾಜಮೌಳಿ ನಿರ್ಧರಿಸಿದ್ದರು. ಒಂದು ವೇಳೆ ಆ ದಿನಾಂಕ ಹೊಂದಿಕೆಯಾಗದೇ ಇದ್ದರೆ ಏಪ್ರಿಲ್ 28ರಂದು ಬಿಡುಗಡೆ ಮಾಡಲು ನಿರ್ಧಾರ ಮಾಡಿದ್ದರು. ಆದರೆ ಈಗ ಹೊಸ ರಿಲೀಸ್ ಡೇಟ್ ಫೈನಲ್ ಮಾಡಲಾಗಿದೆ. ಮಾರ್ಚ್ 25ರಂದು ಆರ್‌ಆರ್‌ಆರ್‌ ರಿಲೀಸ್ ಆಗೋದು ಖಚಿತ ಎಂದು ಚಿತ್ರತಂಡ ಹೇಳಿದೆ.

ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್​ ಅವರು ಈ ಚಿತ್ರದ ಮೂಲಕ ಮೊದಲ ಬಾರಿಗೆ ದಕ್ಷಿಣ ಭಾರತದ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ನಟ ಅಜಯ್​ ದೇವಗನ್​ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಚಿತ್ರದ ಟ್ರೈಲರ್ ಸಾಕಷ್ಟು ಕುತೂಹಲ ಮೂಡಿಸಿದೆ.

‘ಆರ್‌ಆರ್‌ಆರ್‌’ ಚಿತ್ರ 1920ರ ದಶಕದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು, ಕೊಮರಂ ಭೀಮ್ ಅವರ ಜೀವನವನ್ನು ಆಧರಿಸಿದ ಕಾಲ್ಪನಿಕ ಕಥೆ ಆಗಿದೆ. ಈ ಚಿತ್ರದಲ್ಲಿ ಸೀತಾರಾಮರಾಜು ಪಾತ್ರದಲ್ಲಿ ಚರಣ್, ಕೊಮರಂ ಭೀಮ್ ಪಾತ್ರದಲ್ಲಿ ಜೂನಿಯರ್ ಎನ್‌ಟಿಆರ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ.

‘ಆರ್‌ಆರ್‌ಆರ್‌’ ಚಿತ್ರವನ್ನು ಡಿವಿವಿ ದಾನಯ್ಯ ಅವರು 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದಾರೆ. ತೆಲುಗು, ಕನ್ನಡ, ಮಲಯಾಳಂ, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ಚಿತ್ರದ ಕರ್ನಾಟಕದ ವಿತರಣೆ ಹಕ್ಕನ್ನು ‘ಕೆವಿಎನ್‌’ ಪ್ರೊಡಕ್ಷನ್ಸ್ ಸಂಸ್ಥೆ ಪಡೆದುಕೊಂಡಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!