ರಾಜ ಮೌಳಿ ನಿರ್ದೇಶನದ ಬಹು ನಿರೀಕ್ಷಿತ ಆರ್ ಆರ್ ಆರ್ ಚಿತ್ರ ಮಾರ್ಚ್ 25ಕ್ಕೆ ಬಿಡುಗಡೆಯಾಗಲಿದ್ದು, ಮಾರ್ಚ್ 14ರಿಂದ ಪ್ರಚಾರ ಆರಂಭ ಆಗಲಿದೆ.
ಜೂ ಎನ್ ಟಿಆರ್ ಮತ್ತು ರಾಮ್ ಚರಣ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾದಲ್ಲಿ ಅಜಯ್ ದೇವಗನ್, ಆಲಿಯಾ ಭಟ್ ಪ್ರಮುಖ ಪತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾರ್ಚ್ 14ರಂದು ಸಿನಿಮಾದ ಎರಡನೇ ಹಾಡು ಎತ್ತುವ ಜಂಡಾ ಬಿಡುಗಡೆಯಾಗಲಿದೆ.
ಡಿವಿವಿ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಆರ್ ಆರ್ ಆರ್ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿದೆ. ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್ ಭಾಷೆಗಳಿಗೂ ಡಬ್ ಆಗಲಿದೆ. ಕರ್ನಾಟಕದ ಸಿನಿಮಾ ವಿತರಣೆಯನ್ನು ಕೆವಿಎನ್ ಪ್ರೊಡಕ್ಷನ್ ಹೌಸ್ ಮಾಡುತ್ತಿದೆ. ಬಾರಿ ಮೊತ್ತಕ್ಕೆ ಕರ್ನಾಟಕದ ಹಕ್ಕುಗಳನ್ನು ಖರೀದಿ ಮಾಡಿದೆ.
ಈ ಸಿನಿಮಾ ಈ ಹಿಂದೆ ಬಿಡುಗಡೆ ಆಗಬೇಕಾಗಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ಮುಂದಕ್ಕೆ ಹೋಯಿತು. ಬಾಕ್ಸ್ ಆಫೀಸ್ ನಲ್ಲಿ ಚಿತ್ರ ಯಾವ ರೀತಿ ಮೋಡಿ ಮಾಡುತ್ತದೆ ಎಂದು ಕಾದು ನೋಡಬೇಕಿದೆ.
ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು, ಕೊಮರಂ ಭೀಮ್ ಅವರ ಜೀವನವನ್ನು ಆಧರಿಸಿದ ಕಾಲ್ಪನಿಕ ಕಥೆ ಆಗಿದೆ. ಈ ಚಿತ್ರದಲ್ಲಿ ಸೀತಾರಾಮ ರಾಜು ಪಾತ್ರದಲ್ಲಿ ರಾಮ್ ಚರಣ್, ಕೊಮರಂ ಭೀಮ್ ಪಾತ್ರದಲ್ಲಿ ಜೂನಿಯರ್ ಎನ್‌ಟಿಆರ್ ಕಾಣಿಸಿಕೊಂಡಿದ್ದಾರೆ.
ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದ್ದು, ನೋಡುಗರಲ್ಲಿ ಸಾಕಷ್ಟು ಕುತೂಹಲ ಉಂಟು ಮಾಡಿದೆ.
____
Be the first to comment