ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಪುನರ್ಜನ್ಮ ಪ್ರೇಮಕಥೆ ಒಳಗೊಂಡ ‘ರುಧೀರ ಕಣಿವೆ’ ಚಿತ್ರ ಡಿಸೆಂಬರ್ 30ರಂದು ಬಿಡುಗಡೆ ಆಗಲಿದೆ.
5 ಭಾಷೆಗಳಲ್ಲಿ ಸಿನಿಮಾ ಸಿದ್ದವಾಗಿದ್ದು, ಡಿಸೆಂಬರ್ 30ರಂದು ಬಿಡುಗಡೆ ಆಗಲಿದೆ ಎಂದು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಸಮರ್ಥ ಎಂ. ಹೇಳಿದ್ದಾರೆ.
ಈ ಮೊದಲು ನಾನು ‘ನವ ಇತಿಹಾಸ’ ಸಿನಿಮಾ ನಿರ್ದೇಶನ ಮಾಡಿದ್ದು ಇದು 2ನೇ ಪ್ರಯತ್ನ. ಪ್ರಾರಂಭದಿಂದಲೂ ಚಿತ್ರಕ್ಕೆ ತುಂಬಾ ತೊಂದರೆ ಬಂದಿದ್ದರೂ ನಿರ್ಮಾಪಕರು ಹಾಗೂ ಕಲಾವಿದರು ಒಳ್ಳೆ ಸಪೋರ್ಟ್ ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಫೈಟ್, ನಾಲ್ಕು ಹಾಡುಗಳಿದ್ದು, ಬೆಂಗಳೂರು, ರಾಮನಗರ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ ಎಂದು ಸಮರ್ಥ ಎಂ. ತಿಳಿಸಿದ್ದಾರೆ.
ನಿರ್ಮಾಪಕ ವಿಜಯ್ ಕುಮಾರ್ ಅವರು ‘ ಶ್ರೀ ಲಕ್ಷ್ಮಿ ನರಸಿಂಹ ಮೂವೀಸ್ ಬ್ಯಾನರ್ ನಲ್ಲಿ ಮೊದಲಬಾರಿಗೆ ನಿರ್ಮಾಣ ಮಾಡಲಾಗಿದೆ. ಈ ಚಿತ್ರವನ್ನು ಮೊದಲು ಕನ್ನಡದಲ್ಲಿ ರಿಲೀಸ್ ಮಾಡಿ, ನಂತರದ ದಿನಗಳಲ್ಲಿ ಬೇರೆ ಭಾಷೆಯಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ ಎಂದಿದ್ದಾರೆ.
ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಪುನರ್ಜನ್ಮ ಪ್ರೇಮಕಥೆ ಒಳಗೊಂಡ ‘ರುಧೀರ ಕಣಿವೆ’ ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆ ಆಗಿದೆ.
ಸಿನಿಮಾಗೆ ಲಕ್ಕಿ ಗೌಡ ಛಾಯಾಗ್ರಹಣ, ಅರವಿಂದ್ ರಾಜ್ ಸಂಕಲನ, ಚಂದ್ರು ಬಂಡೆ ಮತ್ತು ಅಶೋಕ್ ಸಾಹಸವಿದೆ.
___

Be the first to comment