ರುದ್ರಾಭಿಷೇಕಂ

ವೀರಗಾಸೆ ಹಿನ್ನೆಲೆಯ ‘ರುದ್ರಾಭಿಷೇಕಂ’ ಚಿತ್ರದ ಹಾಡು ಬಿಡುಗಡೆ

ನಮ್ಮ ಸಾಂಸ್ಕೃತಿಕ‌ ಪರಂಪರೆಗಳಲ್ಲಿ ಒಂದಾದ ವೀರಗಾಸೆ ಕಲೆಯನ್ನು ಆರಾಧಿಸುತ್ತ ಬಂದಿರುವ ಕುಟುಂಬ ಹಾಗೂ ವೀರಭದ್ರ ದೇವರ ಇತಿಹಾಸವನ್ನು ಹೇಳುವ ಚಿತ್ರ ರುದ್ರಾಭಿಷೇಕಂ. ವಸಂತ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ವಿಜಯ ರಾಘವೇಂದ್ರ, ಪ್ರಿಯಾಕಾ ತಿಮ್ಮೇಶ್ ನಾಐಕ, ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಮುಗಿದಿದ್ದು, ಇತ್ತೀಚೆಗೆ ಹಾಡೊಂದರ ಬಿಡುಗಡೆ ಸಮಾರಂಭ ನಡೆಯಿತು.

ಹಾಪ್ ಕಾಮ್ಸ್ ಅಧ್ಯಕ್ಷರಾದ ಚಂದ್ರೇಗೌಡ ಅವರು ಈ ಸಾಂಗ್ ಲಾಂಚ್ ಮಾಡಿ ಶುಭ ಹಾರೈಸಿದರು. ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅವರು ವೀರಗಾಸೆ ಕಲಾವಿದ ಅಲ್ಲದೆ, ಇದೇ ಮೊದಲ ಬಾರಿಗೆ ತಂದೆ, ಮಗನಾಗಿ, ದ್ವಿಪಾತ್ರದಲ್ಲಿ ವಿಜಯ ರಾಘವೇಂದ್ರ ಅವರು ಕಾಣಿಸಿಕೊಂಡಿದ್ದಾರೆ.

ವೇದಿಕೆಯಲ್ಲಿ ನಿರ್ಮಾಪಕರಲ್ಲಿ ಒಬ್ಬರಾದ ಕೆ.ವೆಂಕಟೇಶ್ ಮಾತನಾಡುತ್ತ ನಾವೆಲ್ಲ ವಿಜಯಪುರದ ಸ್ನೇಹಿತರು. ಗೆಳೆಯ ವಸಂತ್ ಬಂದು ಈ ಕಥೆ ಹೇಳಿದಾಗ ತುಂಬಾ ಇಷ್ಟವಾಯಿತು. ನಾಯಕ ವಿಜಯ ರಾಘವೇಂದ್ರ ಅವರು ಚಿತ್ರ ಪ್ರಾರಂಭಿಸಿದ ದಿನದಿಂದ ಈವರೆಗೆ ಒಮ್ಮೆಯೂ ತೊಂದರೆ ಕೊಟ್ಟಿಲ್ಲ. ಅವರೇ ಸಲಹೆ ಸೂಚನೆಯನ್ನು ನೀಡಿದರು. ಗೌಡ್ರು ಪಾತ್ರವನ್ನ ಬಲ ರಾಜವಾಡಿ ಅದ್ಭುತವಾಗಿ ನಿರ್ವಹಿಸಿದ್ದಾರೆ ಎಂದರು.

ರುದ್ರಾಭಿಷೇಕಂ

ನಾಯಕ ವಿಜಯ ರಾಘವೇಂದ್ರ ಮಾತನಾಡುತ್ತ ನನಗೆ ವೀರಗಾಸೆ ಪಾತ್ರ ಮಾಡುವುದು ತುಂಬಾ ಚಾಲೆಂಜಿಂಗ್ ಆಗಿತ್ತು. ಈ ಪಾತ್ರವನ್ನು ಅನುಭವಿಸಿ ಮಾಡಿದ್ದೇನೆ. ನನ್ನ ಪೂರ್ವಜರ ಕಾಲದಲ್ಲಿ ನಡೆದ ಘಟನೆ ಈಗಿನ ಕಾಲದ ವ್ಯಕ್ತಿಗೆ ಕನೆಕ್ಟ್ ಆಗುತ್ತಾ ಹೋಗುತ್ತದೆ. ತಂದೆ, ಮಗನಾಗಿ ಎರಡೂ ಪಾತ್ರಗಳನ್ನು ನಿಭಾಯಿಸಿದ್ದೇನೆ ಎಂದರು. ನಾಯಕಿ ಪ್ರಿಯಾಂಕ ತಿಮ್ಮೇಶ್ ಮಾತನಾಡಿ ನಾನು ಈ ಚಿತ್ರ ಒಪ್ಪಲು 3 ಕಾರಣವಿದೆ. ಚಿತ್ರದಲ್ಲಿ ಶಿವನ ಭಕ್ತೆ, ಹಳ್ಳಿ ಹಾಗೂ ಸಿಟಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ ಎಂದರು.

ಸಂಗೀತ ನಿರ್ದೇಶಕ ವಿ.ಮನೋಹರ್ ಮಾತನಾಡಿ ಈ ಚಿತ್ರದಲ್ಲಿ ಎಲ್ಲಾ ಕನ್ನಡದ ಉದಯೋನ್ಮುಖ ಪ್ರತಿಭೆಗಳ ಕೈಲೇ ಹಾಡಿಸಿದ್ದೇನೆ ಎಂದು ಗಾಯಕ, ಗಾಯಕಿಯರನ್ನು ಪರಿಚಯಿಸಿದರು.

‘ರುದ್ರಾಭಿಷೇಕಂ’ ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಸಂಸ್ಥೆಯ ಮೊದಲ ಚಿತ್ರವಾಗಿದ್ದು, ಮಂಜುನಾಥ ಕೆ.ಎನ್, ಎನ್.ಜಯರಾಮಪ್ಪ, ಕೆ.ವೆಂಕಟೇಶ್, ಬಿ.ಚಿದಾನಂದ ಮೂರ್ತಿ, ಸುರೇಶ್ ಬಾಬು, ಬಿ.ಕೆ.ಅಶ್ವಥ್ ನಾರಾಯಣ, ಶಿವಕುಮಾರ್, ಕೆ.ಎಸ್.ರವಿಕುಮಾರ್‌, ಕುಸುಮ ವಸಂತ್ ಕುಮಾರ್ ಸೇರಿದಂತೆ 9 ಜನ ನಿರ್ಮಾಪಕರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ಸಾರೆ.

ದೈವದ ಹಿನ್ನೆಲೆ ಇರುವ ಜನಪದ ಕಲೆಯನ್ನು ನಾಡಿನ ಮನೆ ಮನೆಗೂ ತಲುಪಿಸಬೇಕು ಎನ್ನುವುದೇ ನಮ್ಮ ಉದ್ದೇಶ. ನಾಯಕ ವಿಜಯ ರಾಘವೇಂದ್ರ ಕೂಡ ನಮಗೆ ತುಂಬಾ ಸಹಕಾರ ಕೊಟ್ಟಿದ್ದಾರೆ. ಚಿತ್ರದಲ್ಲಿ ನಾನೂ ಒಬ್ಬ ತತ್ವಜ್ಞಾನಿಯಾಗಿ ನಟಿಸಿದ್ದೇನೆ. ತಂದೆ, ಮಗ ಎರಡೂ ಪಾತ್ರಗಳ ಜತೆ ಇಡೀ ಚಿತ್ರದಲ್ಲಿ ಬರುವ ನನ್ನ ಪಾತ್ರಕ್ಕೆ ಎರಡು ಗೆಟಪ್ ಇದೆ ಎಂದೂ ವಸಂತಕುಮಾರ್ ಹೇಳಿದರು.

ಈ ಚಿತ್ರಕ್ಕೆ ದೇವನಹಳ್ಳಿ ಸುತ್ತಮುತ್ತ ಹಾಗೂ ಕರಾವಳಿಯ ಗೋಕರ್ಣ, ಹೊನ್ನಾವರ, ಕುಮಟಾ, ಅಬ್ಬಕ್ಕ ಫೋರ್ಟ್ ಅಲ್ಲದೆ ಅಘನಾಶಿನಿ ಹಿನ್ನೀರಿನ, ಈವರೆಗೆ ಯಾರೂ ಶೂಟ್ ಮಾಡದಂಥ ಲೊಕೇಶನ್ ನಲ್ಲಿ ಸುಮಾರು 50ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಮಾತಿನ ಭಾಗ ಹಾಗೂ ಹಾಡುಗಳ ಚಿತ್ರೀಕರಣ ನಡೆಸಲಾಗಿದೆ.

ನಮ್ಮ ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ವೀರಗಾಸೆ ಕಲೆಯ ಮಹತ್ವ, ಇತಿಹಾಸವನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಈ ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ರುದ್ರಾಭಿಷೇಕಂ ಚಿತ್ರ ಹೇಳುತ್ತದೆ. ಬಲ ರಾಜವಾಡಿ, ವಿ.ಮನೋಹರ್, ಮನು, ಸನತ್, ಬುಲೆಟ್ ವಿನು, ಮಮತಾ ತುರುವೇಕೆರೆ, ನವನಿತಾ ಶೆಟ್ಟಿ, ಮಂಜುಳಾ ಹಾಗೂ ಇತರರು ಪ್ರಮುಖ ಪಾತ್ರಗಳಲ್ಲಿದ್ದಾರೆ.

ವಿ.ಮನೋಹರ್ ಅವರ ಸಂಗೀತ ಸಂಯೋಜನೆ, ಮುತ್ತುರಾಜ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!