ರುಕ್ಮಿಣಿ ವಸಂತ

ಕಾಂತಾರ ನನ್ನನ್ನು ಬದಲಿಸಿದೆ: ರುಕ್ಮಿಣಿ ವಸಂತ

‘ಕಾಂತಾರ ಚಾಪ್ಟರ್ 1’ ಚಿತ್ರದ ಅಭಿನಯ ನನ್ನನ್ನು ಬದಲಿಸಿದೆ ಎಂದು ಚಿತ್ರದ ನಾಯಕಿ ರುಕ್ಮಿಣಿ ವಸಂತ ಅವರು ಹೇಳಿದ್ದಾರೆ.

‘ಕಾಂತಾರ ಚಾಪ್ಟರ್ 1’ ಚಿತ್ರದ ಟ್ರೈಲರ್ ಬಿಡುಗಡೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರುಕ್ಮಿಣಿ ವಸಂತ ಅವರು, ಹೊಂಬಾಳೆ ಫಿಲಂಸ್ ಅವರ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಉತ್ತಮ ವಿಚಾರವಾಗಿದೆ. ಇದಕ್ಕಾಗಿ ರಿಷಬ್ ಶೆಟ್ಟಿ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು. ಈ ಚಿತ್ರದಲ್ಲಿ ಅಭಿನಯಿಸುತ್ತಾ ನಾನು ಬೆಳೆದಿದ್ದೇನೆ. ಈ ಚಿತ್ರ ನನ್ನನ್ನು ಬದಲಾಯಿಸಿದೆ ಎಂದು ಹೇಳಿದರು.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಚಿತ್ರದಿಂದ ಇಲ್ಲಿಯವರೆಗೆ ನನ್ನನ್ನು ಪ್ರೋತ್ಸಾಹ ನೀಡಿದ್ದೀರಿ. ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ರಿಷಬ್ ಶೆಟ್ಟಿ ಅವರು ಎಷ್ಟೇ ಒತ್ತಡ ಇದ್ದರೂ ಅದನ್ನು ನಮ್ಮ ಮೇಲೆ ಹೇರುತ್ತಿರಲಿಲ್ಲ. ಪ್ರಗತಿ ಶೆಟ್ಟಿ ಅವರು ಸಾಕಷ್ಟು ಸಹಕಾರ ನೀಡಿದ್ದಾರೆ. ವಸ್ತ್ರ ವಿನ್ಯಾಸಕಿಯಾಗಿ ಮಾತ್ರವಲ್ಲದೆ, ಶೂಟಿಂಗ್ ನಲ್ಲಿ ಅವರು ನೆರವಾಗಿದ್ದಾರೆ. ಈ ಚಿತ್ರದ ಭಾಗವಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಅವರು ಹೇಳಿದರು.

ಕಾಂತಾರ ಚಾಪ್ಟರ್ 1 ಸಿನಿಮಾದ ಟ್ರೈಲರ್ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಟ್ರೈಲರ್ ನಲ್ಲಿ ರಿಷಬ್ ಜೊತೆಗೆ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!