ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನವೆಂಬರ್ 25ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಸಿನಿಮಾ ನೈಜ ಘಟನೆ ಆಧರಿಸಿ ಹೆಣೆದ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಚಿತ್ರಕ್ಕೆ ಕಥೆ ಬರೆದು ಭಾಸ್ಕರ್ ಆರ್ ನೀನಾಸಂ ನಿರ್ದೇಶನ ಮಾಡಿದ್ದಾರೆ. ರಾಕೇಶ್ ಮಯ್ಯ, ಪಾವನ ಗೌಡ ನಾಯಕ, ನಾಯಕಿಯಾಗಿ ನಟಿಸಿದ್ದು, ಪ್ರಮುಖ ಪಾತ್ರದಲ್ಲಿ ಮಧುನಂದನ್ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಘು ಶಿವಮೊಗ್ಗ, ಜಹಾಂಗೀರ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಗಣದಲ್ಲಿದ್ದಾರೆ.
ನಟ ಅಚ್ಯುತ್ ಕುಮಾರ್ ʻʻಭಾಸ್ಕರ್ ಅವರು ನಟನೆ ಮಾಡುತ್ತಾರೆ ಎಂದು ಗೊತ್ತಿತ್ತು. ಆದರೆ ನಿರ್ದೇಶನ ಮಾಡುತ್ತಾರೆ ಎಂದು ಗೊತ್ತಿರಲಿಲ್ಲ. ನನ್ನ ನಾಟಕಗಳಲ್ಲಿ ಭಾಸ್ಕರ್ ಅಭಿನಯಿಸಿದ್ದಾರೆ. ತುಂಬಾ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಇನ್ಸ್‌ಪೆಕ್ಟರ್ ಪಾತ್ರವನ್ನು ನೀವೆ ಮಾಡಬೇಕು ಎಂದು ಹೇಳಿದ್ದರಿಂದ ಪಾತ್ರ ನಿರ್ವಹಿಸಿದ್ದೇನೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಮಧುನಂಧನ್ ಚಿತ್ರವನ್ನು ನಿರ್ಮಾಣ ಮಾಡುವುದರ ಜತೆಗೆ ನಟನೆ ಕೂಡ ಮಾಡಿದ್ದಾರೆʼʼ ಎಂದಿದ್ದಾರೆ.
ಎಂ.ಎಂ. ಸಿನಿಮಾಸ್ ಬ್ಯಾನರ್‌ನಡಿ ಸುರಭಿ ಲಕ್ಷ್ಮಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್‌ಕಾಂತ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ ಸಂಕಲನ ಚಿತ್ರಕ್ಕಿದೆ.
__
Be the first to comment