ಮಹಿಳಾ ಕ್ರಿಕೆಟ್ ಕುರಿತ ‘ಸಹಾರಾ’ ಸಿನಿಮಾ ಜೂನ್ 7 ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ.
ಪುರುಷರ ಕ್ರಿಕೆಟ್‌ಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಮಹಿಳಾ ಕ್ರಿಕೆಟ್ ಕಡೆಗಣಿಸಲಾಗಿದೆ. ಮಂಡ್ಯ ಮೂಲದ ಗ್ರಾಮೀಣ ಪ್ರದೇಶದ ಯುವತಿಯೊಬ್ಬರು ಕ್ರಿಕೆಟ್‌ನಲ್ಲಿ ಸಮಸ್ಯೆ ಎದುರಿಸಿ ಬಳಿಕ ಮಾಡಿದ ಸಾಧನೆಯ ಎಳೆಯನ್ನು ಈ ಚಿತ್ರ ಹೊಂದಿದೆ. ಜನತೆ ಚಿತ್ರಮಂದಿರಗಳಿಗೆ ಧಾವಿಸಿ ಸಿನಿಮಾ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ನಾಯಕ ನಟಿ ಸಾರಿಕಾ ರಾವ್ ಅವರು ಪತ್ರಿಕಾ ಗೋಷ್ಠಿಯಲ್ಲಿ ಮನವಿ ಮಾಡಿದರು.
ಭಾರತ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ಮತ್ತು ರಘುರಾಮ್ ಭಟ್ ಅವರು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಮಂಜೇಶ್ ಭಗವತ್ ನಿರ್ಮಾಣದ ಜೊತೆಗೆ ನಿರ್ದೇಶನ ಮಾಡಿದ್ದಾರೆ. ಮಾ ಕ್ರಿಯೆಷನ್ಸ್ ಪ್ರಥಮ ನಿರ್ಮಾಣದ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ರಣಜಿ ಆಟಗಾರ ಕೆ.ಬಿ. ಪವನ್ ಅವರ ಬಳಿ ಕ್ರಿಕೆಟ್ ಆಟದ ಬಗ್ಗೆ ಸಾರಿಕಾ ತರಬೇತಿ ಪಡೆದುಕೊಂಡು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ನಂಜನಗೂಡಿನ ಕಳಲೆ ಗ್ರಾಮ ಮತ್ತು ಸುತ್ತಮುತ್ತ ಚಿತ್ರೀಕರಣ ನಡೆದಿದೆ.
ಚಿತ್ರದಲ್ಲಿ ಮಂಜುನಾಥ ಹೆಗಡೆ, ಕುರಿ ಸುನಿಲ್, ಅಂಕುಶ್ ರಜತ್, ರಂಜನ್, ಮಂಜುಳಾ ರೆಡ್ಡಿ, ಪ್ರಕಾಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ವಿನ್ಸೆಂಟ್ ಅಂಥೋಣಿ ರೂಥ್ ಛಾಯಾಗ್ರಹಣ, ಸೂರಜ್ ಜೋಯಿಸ್ ಸಂಗೀತ ಸಂಯೋಜನೆ, ಜೇಮ್ಸ್ ಚೇತನ್, ಸಿಂಪಲ್ ಸುನಿ, ರತೀಶ್ ಜಯನ್, ಮಂಜೇಶ್ ಅವರು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.
ರಾಜೇಶ್ ಕೃಷ್ಣನ್, ಚಂದನ್ ಶೆಟ್ಟಿ, ವ್ಯಾಸರಾಜ್, ನವೀನ್ ಸಜ್ಜು, ಸಿದ್ದಾರ್ಥ, ಸುಪ್ರಿಯಾ ರಾಮ್ ಹಾಡಿದ್ದಾರೆ. ಸಂತೋಷ್ ನೃತ್ಯ ಸಂಯೋಜನೆ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ.
Be the first to comment