‘ಯೂಟರ್ನ್’ ಸಿನಿಮಾ ಮೂಲಕ ಜನಪ್ರಿಯತೆ ಪಡೆದ ಶ್ರದ್ಧಾ ಶ್ರೀನಾಥ್, ತೆಲುಗು ನಟ ವಿಕ್ಟರಿ ವೆಂಕಟೇಶ್ ಅವರ 75ನೇ ಬಹುಭಾಷಾ ಸಿನಿಮಾ ‘ಸೈಂಧವ್’ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಶೈಲೇಶ್ ಕೋಲನು ನಿರ್ದೇಶನದ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್‌ನಲ್ಲಿ ಎರಡನೇ ಹಂತದ ಚಿತ್ರೀಕರಣ ನಡೆಯುತ್ತಿದೆ. ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಚಿತ್ರದಲ್ಲಿ ವಿಕ್ಟರಿ ವೆಂಕಟೇಶ್‌ಗೆ ಜೋಡಿಯಾಗಿ ನಟಿಸುತ್ತಿರುವ ಶ್ರದ್ಧಾ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.
‘ಜೆರ್ಸಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಶ್ರದ್ಧಾ ಕನ್ನಡದ ಜತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿದ್ದಾರೆ.
ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್. ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನವಿದೆ. ಈ ವರ್ಷ ಕ್ರಿಸ್‌ಮಸ್ ವೇಳೆಗೆ ಚಿತ್ರ ತೆರೆಗೆ ಬರಲಿದೆ.
—-
Be the first to comment