25ನೇ ದಿನದತ್ತ ‘ಸಖತ್’

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ನ ಸಖತ್ ಸಿನಿಮಾ ಗೆಲುವಿನ ನಾಗಲೋಟ ಮುಂದುವರೆಸಿದ್ದು, ಸಿನಿಮಾ 25ನೇ ದಿನದತ್ತ ದಾಪುಗಾಲಿಟ್ಟಿದೆ.

ಮೂರು ವಾರದ ಹಿಂದಷ್ಟೇ ರಿಲೀಸ್ ಆಗಿದ್ದ ಸಖತ್ ಸಿನಿಮಾಗೆ ಸಖತ್ ರೆಸ್ಪಾನ್ಸ್ ಸಿಕ್ತಿತ್ತು. ಇದೀಗ ಮತ್ತೊಮ್ಮೆ ಗಣಿ-ಸುನಿ ಕಾಂಬೋ ವರ್ಕ್ ಆಗಿದೆ. ಈ ಖುಷಿಯಲ್ಲಿ ಚಿತ್ರತಂಡ ಹಲವು ವಿಚಾರಗಳನ್ನು ಹಂಚಿಕೊಂಡಿದೆ.

ಸಖತ್ ಸಿನಿಮಾ ಬಗ್ಗೆ ಮಾತನಾಡಿದ ಗೋಲ್ಡನ್ ಸ್ಟಾರ್ ಗಣೇಶ್, ” ಸಿನಿಮಾದ ಬಗ್ಗೆ ಪ್ರೇಕ್ಷಕರಿಂದ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ. ಫ್ಯಾಮಿಲಿ ಆಡಿಯನ್ಸ್ ಸಿನಿಮಾ ಎಂಜಾಯ್ ಮಾಡ್ತಿದ್ದಾರೆ. ಕೋವಿಡ್ ಭಯದಿಂದ ನಮಗೆ ತುಸು ಹೊಡೆತ ಬಿದ್ದಿದ್ದು ನಿಜವಾದರೂ ಸಿನಿಮಾದ ಬಗ್ಗೆ ಬಂದ ಒಳ್ಳೆಯ ಬಾಯಿ ಪ್ರಚಾರದಿಂದಾಗಿ ಸಿನಿಮಾ ಮೂರು ವಾರಗಳಾದರೂ ಚೆನ್ನಾಗಿ ಓಡುತ್ತಿದೆ” ಎಂದಿದ್ದಾರೆ.

ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ” ಕೊರೋನಾ ಹಾಗೂ ಬೇರೆ ಸಿನಿಮಾಗಳ ನಡುವೆಯೂ ಸಖತ್ ಸಿನಿಮಾ ಗೆದ್ದಿದೆ. 2ನೇ ವಾರಕ್ಕೆ ನಾವು ಹಾಕಿದ ಬಂಡವಾಳ ವಾಪಸ್ ಬಂದಿದ್ದು, 3 ವಾರ ಬರುವುದೆಲ್ಲವೂ ಲಾಭವಾಗಲಿದೆ” ಎಂದು ಹೇಳಿದ್ದಾರೆ.

ಕೆವಿಎನ್ ಸಂಸ್ಥೆಯ ಸುಪ್ರೀತ್‌ ಮಾತನಾಡಿ, ” ಪ್ರೊಡಕ್ಷನ್ ಹೌಸ್ ನಿರ್ಮಿಸಿರುವ ಸಖತ್ ಸಿನಿಮಾವು ಬಿಸಿನೆಸ್ ವಿಚಾರದಲ್ಲಿ ತಮಗೆ ತೃಪ್ತಿ ತಂದಿದೆ. ನಾವು ಖುಷಿಯಾಗಿದ್ದೇವೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊರೋನಾ ಹಾಗೂ ಬೇರೆ ಸಿನಿಮಾಗಳ ನಡುವೆಯೂ ಸಖತ್ ಸಿನಿಮಾತಂಡ ಸಕ್ಸಸ್ ಖುಷಿಯಲ್ಲಿದೆ. ಪರಭಾಷಾ ಸಿನಿಮಾಗಳಿಗೆ ಸೆಡ್ಡು ಹೊಡೆದು 25ನೇ ದಿನದತ್ತ ಮುನ್ನುಗುತ್ತಿರುವುದು ಇಡೀ ಸಖತ್ ಬಳಗಕ್ಕೆ ಖುಷಿಕೊಟ್ಟಿದೆ. ಗಣೇಶ್ ಅಭಿನಯದ ಸಖತ್ ಸಿನಿಮಾ ನವೆಂಬರ್ 26 ರಂದು ರಾಜ್ಯಾದ್ಯಂತ ರಿಲೀಸ್ ಆಗಿತ್ತು. ಗಣಿಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಹಾಗೂ ಸುರಭಿ ನಟಿಸಿದ್ದು, ಚಿತ್ರಕ್ಕೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದಾರೆ. ನಿಶಾ ವೆಂಕಟ್ ಕೊಂಕಣಿ, ಸುಪ್ರಿತ್ ನಿರ್ಮಾಣ ಮಾಡಿದ್ದರು. ಉಳಿದಂತೆ ರಂಗಾಯಣ ರಘು, ರವಿಶಂಕರ್ ಗೌಡ, ಸಾಧು ಕೋಕಿಲ, ಧರ್ಮಣ್ಣ ಇನ್ನೂ ಹಲವರು ನಟಿಸಿದ್ದಾರೆ.

ಸಖತ್ ಸಿನಿಮಾ ನೆಟ್ ಫ್ಲಿಕ್ಸ್ ಗೆ ಮಾರಾಟವಾಗಿದ್ದು, OTT ಯಲ್ಲಿ ಪ್ರದರ್ಶನಗೊಳ್ಳಲಿದೆ. ಟಿವಿ ಪ್ರಸಾರದ ಹಕ್ಕನ್ನು ಉದಯ ಟಿವಿ ಖರೀದಿಸಿದೆ ಎಂದು ಚಿತ್ರತಂಡ ಹೇಳಿದೆ.


Be the first to comment

Leave a Reply

Your email address will not be published. Required fields are marked *

Translate »
error: Content is protected !!