ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್ ‘ ಚಿತ್ರ ಮಾರ್ಚ್ 21 ರಂದು ಮತ್ತೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಮಾರ್ಚ್ 21 ರಂದು ಮೊದಲು ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ರೀರಿಲೀಸ್ ಆಗಲಿದೆ. ಚಿತ್ರತಂಡ ನಂತರ ರಾಷ್ಟ್ರವ್ಯಾಪಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದೆ.
‘ಸಲಾರ್ ‘ ಚಿತ್ರ ಡಿಸೆಂಬರ್ 22 ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ದೇಶದಾದ್ಯಂತ ಬಿಡುಗಡೆಯಾಗಿತ್ತು. ಇದು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 700 ಕೋಟಿ ರೂ. ಗಳಿಕೆ ಕಂಡಿತ್ತು. ಚಿತ್ರದಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮತ್ತು ಜಾನ್ ವಿಜಯ್ ಮುಂತಾದವರು ನಟಿಸಿದ್ದಾರೆ.
ಕಾಲ್ಪನಿಕ ನಗರವಾದ ಖಾನ್‌ಸಾರ್‌ನಲ್ಲಿ ನಡೆಯುವ ಈ ಚಿತ್ರವು ದೇವ (ಪ್ರಭಾಸ್) ಮತ್ತು ವರ್ಧ (ಪೃಥ್ವಿರಾಜ್) ಎಂಬ ಇಬ್ಬರು ಸ್ನೇಹಿತರ ಸುತ್ತ ಸುತ್ತುತ್ತದೆ. ಪ್ರೇಕ್ಷಕರಿಂದ ಬೇಡಿಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ರೀರಿಲೀಸ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಲಾರ್‌ನ ಎರಡನೇ ಭಾಗ ಚರ್ಚೆಯಲ್ಲಿದೆ. ಪೃಥ್ವಿರಾಜ್ ಸುಕುಮಾರನ್ ಅವರು ಚಿತ್ರದ ಭಾಗವಾಗಿರುವುದಾಗಿ ಖಚಿತಪಡಿಸಿದ್ದಾರೆ. ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್‌ಟಿಆರ್ ಅವರ ಚಿತ್ರ ನಿರ್ದೇಶನದಲ್ಲಿ ಬ್ಯುಸಿಯಾಗಿರುವುದರಿಂದ ಸಲಾರ್ ಸೀಕ್ವೆಲ್ ವಿಳಂಬವಾಗುವ ಸಾಧ್ಯತೆಯಿದೆ.

Be the first to comment