ಬಾಲಿವುಡ್ ನಟ ಸಲ್ಮಾನ್ ಖಾನ್ ತಮಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಹೊಸದಾಗಿ ಬುಲೆಟ್ ಫ್ರೂಪ್ ಕಾರ್ ಅನ್ನು ತೆಗೆದುಕೊಂಡಿದ್ದಾರೆ. ಅಲ್ಲದೇ, ತಮ್ಮ ಬಾಡಿಗಾರ್ಡ್‌ಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಸಲ್ಮಾನ್ ಖಾನ್ ಅವರು, ತಮ್ಮ ರಕ್ಷಣೆಗಾಗಿ ಬುಲೆಟ್ ಫ್ರೂಪ್ ಕಾರು ಖರೀದಿ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಸಲ್ಮಾನ್ ನಟನೆಯ ಟೈಗರ್ 3 ಚಿತ್ರೀಕರಣ ಪ್ರಾರಂಭವಾಗಿದ್ದು ಈ ಚಿತ್ರೀಕರಣಕ್ಕೆ ಸಲ್ಮಾನ್ ಅವರು ಬುಲೆಟ್ ಫ್ರೂಪ್ ಕಾರ್ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಲಾಗಿದೆ.
ಜೀವ ಬೆದರಿಕೆ ಕಾರಣದಿಂದ ಸಲ್ಮಾನ್ ಖಾನ್ ಅವರು ಇತ್ತೀಚೆಗೆ ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಈ ವೇಳೆ ಅವರು ವಿಶೇಷ ಪಿಸ್ತೂಲ್ ಇಟ್ಟುಕೊಳ್ಳಲು ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು.
ಪಂಜಾಬಿ ಗಾಯಕ ಸಿಧು ಮೂಸೆವಾಲಾ ರೀತಿ ಸಲ್ಮಾನ್ ಮತ್ತು ಅವರ ತಂದೆಯನ್ನು ಕೊಲ್ಲುವುದಾಗಿ ಬೆದರಿಕೆ ಪತ್ರ ಬಂದಿತ್ತು. ಬಳಿಕ ಸಲ್ಮಾನ್ ಕುಟುಂಬಕ್ಕೆ ಭದ್ರತೆ ಹೆಚ್ಚಿಸಲಾಗಿತ್ತು.
ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಶಂಕಿತ ಆರೋಪಿಗಳನ್ನು ಪಂಜಾಬ್‌ನ ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿ ಇತ್ತೀಚೆಗೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ.
ಸಲ್ಮಾನ್ ಖಾನ್ ಅವರು ಅನಗತ್ಯವಾಗಿ ಯಾವುದೇ ಕಾರ್ಯಕ್ರಮಗಳಲ್ಲೂ ಭಾಗಿಯಾಗುತ್ತಿಲ್ಲ ಎಂದು ತಿಳಿದು ಬಂದಿದೆ.
___

Be the first to comment