ನಟಿ ಸಮಂತಾ ರುತ್ ಪ್ರಭು ಮತ್ತು ನಿರ್ದೇಶಕ ರಾಜ್ ನಿಡಿಮೋರು ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಶನ್‌ನ ಲಿಂಗ ಭೈರವಿ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ವಿವಾಹವಾಗಿದ್ದಾರೆ.
ಈ ಕುರಿತು ಸಮಂತಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದು, 🤍01.12.2025🤍 ಎಂದು ಬರೆದುಕೊಂಡಿದ್ದಾರೆ. ಸಮಂತಾ ಪೋಸ್ಟ್‌ಗೆ ಹಲವಾರು ಮಂದಿ ಶುಭಾಶಯ ಕೋರಿದ್ದಾರೆ.
ಸಮಂತಾ ರುತ್ ಪ್ರಭು ತಮ್ಮ ಇನ್‌ಸ್ಟಾಗ್ರಾಂನಲ್ಲಿ ರಾಜ್ ನಿಡಿಮೋರು ಜೊತೆಗಿರುವ ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಅವರು ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ದೃಢಪಡಿಸಲಿಲ್ಲ. ಈ ಜೋಡಿ 2024 ರಿಂದ ರಿಲೇಷನ್‌ಶಿಪ್‌ನಲ್ಲಿದೆ ಎಂದು ವದಂತಿಗಳಿವೆ.
ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು ಇಬ್ಬರಿಗೂ ಇದು ಎರಡನೇ ಮದುವೆ. ಸಮಂತಾ ಈ ಹಿಂದೆ ನಟ ನಾಗ ಚೈತನ್ಯ ಅವರನ್ನು ವಿವಾಹವಾಗಿ 2021ರಲ್ಲಿ ವಿಚ್ಛೇದನ ಪಡೆದರು. ರಾಜ್ ನಿಡಿಮೋರು 2015 ರಲ್ಲಿ ಶ್ಯಾಮಲಿ ದೇ ಅವರನ್ನು ವಿವಾಹವಾಗಿದ್ದರು.
ಸಮಂತಾ ಮತ್ತು ರಾಜ್ ನಿಡಿಮೋರು ಅವರು ಪ್ರೈಮ್ ವಿಡಿಯೋ ವೆಬ್ ಸರಣಿ ದಿ ಫ್ಯಾಮಿಲಿ ಮ್ಯಾನ್ ಸೀಸನ್ 2 ಮತ್ತು ಸಿಟಾಡೆಲ್: ಹನಿ ಬನ್ನಿಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಅಂದಿನಿಂದ ಇಬ್ಬರು ರಿಲೇಷನ್‌ಶಿಪ್‌ನಲ್ಲಿದ್ದಾರೆ ಎನ್ನುವ ವದಂತಿಗಳು ಕೇಳಿ ಬಂದಿದ್ದವು.





Be the first to comment