‘ವೃಷಭ’ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ನಟನೆಯ ‘ವೃಷಭ’ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್ ನಟಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಂದ ಕಿಶೋರ್ ಅವರು ಮೋಹನ್‌ ಲಾಲ್ ನಟಿಸಿರುವ ಮೊದಲ ಪ್ಯಾನ್-ಇಂಡಿಯಾ ಚಿತ್ರ ವೃಷಭಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರವನ್ನು ಆಕ್ಷನ್-ಪ್ಯಾಕ್ಡ್ ಎಂಟರ್‌ಟೈನರ್ ಎಂದು ಬಿಂಬಿಸಲಾಗಿದೆ. ಇದು 500 ವರ್ಷಗಳ ಹಿಂದಿನ ತಂದೆ-ಮಗನ ಕಥೆಯನ್ನು ಒಳಗೊಂಡಿದೆ. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ.

ಸಮರ್ಜಿತ್ ಅವರು ‘ವೃಷಭ’ ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಚಿತ್ರತಂಡ ಅಧಿಕೃತ ಪ್ರಕಟಣೆ ಮಾಡಲಿದೆ.  ಈ ಬಹುಭಾಷಾ ಚಿತ್ರದಲ್ಲಿ ತೆಲುಗು ನಟ ರೋಷನ್ ಮೇಕ ಬದಲಿಗೆ ಸಮರ್ಜಿತ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಸಮರ್ಜಿತ್ ಈಗಾಗಲೇ  ಮುಂಬೈ ಮತ್ತು ಇತರ ಸ್ಥಳಗಳಲ್ಲಿ ಈಗಾಗಲೇ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಚಿತ್ರಕ್ಕಾಗಿ  ಕುದುರೆ ಸವಾರಿ, ಕತ್ತಿವರಸೆ ಮತ್ತು ಜಿಮ್ನಾಸ್ಟಿಕ್ಸ್ ಸೇರಿದಂತೆ ಕಠಿಣ ತರಬೇತಿ ಪಡೆದಿದ್ದಾರೆ.

ವೃಷಭ ಚಿತ್ರದಲ್ಲಿ ರಾಗಿಣಿ ದ್ವಿವೇದಿ, ಸಿ ಚಂದ್ರಕಾಂತ್, ರಾಮಚಂದ್ರರಾಜು, ನೇಹಾ ಸಕ್ಸೇನಾ, ಯಶೋಧ, ಮತ್ತು ಸಂಜಯ್ ಕೃಷ್ಣ  ನಟಿಸಿದ್ದಾರೆ. ಶೋಭಾ ಕಪೂರ್, ಏಕ್ತಾ ಆರ್ ಕಪೂರ್, ಸಿಕೆ ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ  ಚಿತ್ರವನ್ನು ನಿರ್ಮಿಸಿದ್ದಾರೆ.

2023ರಲ್ಲಿ ಸೆಟ್ಟೇರಿದ ವೃಷಭ ಚಿತ್ರವನ್ನು ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಇದು ಕನ್ನಡ, ತಮಿಳು ಮತ್ತು ಹಿಂದಿ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!