ಹಳ್ಳಿಯ ಕಥೆ ಹೇಳುವ ಸಂಭವಾಮಿ ಯುಗೇ ಯುಗೇ!

“ಸಂಭವಾಮಿ ಯುಗೇ ಯುಗೇ” ಗ್ರಾಮೀಣ ಹಿನ್ನೆಲೆಯ ಚಿತ್ರ ಎಂದು ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ ಹೇಳಿದ್ದಾರೆ.

ಇದೊಂದು ಕಮರ್ಷಿಯಲ್‍ ಥ್ರಿಲ್ಲರ್ ಚಿತ್ರ. ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ನಾನು ಹತ್ತು ವರ್ಷಗಳಿಂದ ಹಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿದ್ದೆ. ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ಹಳ್ಳಿ ಉಳಿಯುವುದು ಹೇಗೆ? ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲೆಸಬೇಕು ಎಂಬುದೆ ಚಿತ್ರದ ಕಥಾ ಸಾರಾಂಶ. ಜೂನ್‍ 21ಕ್ಕೆ ಚಿತ್ರ ಬಿಡುಗಡೆ ಆಗಲಿದೆ ಎಂದಿದ್ದಾರೆ.

ಇದು ಕಮರ್ಷಿಯಲ್‍ ಚಿತ್ರವಾದರೂ ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವ ಹಲವು ಅಂಶಗಳಿವೆ. ಎರಡೂವರೆ ಗಂಟೆ ಹಳ್ಳಿಯ ಕಡೆ ಚಿತ್ರ ಕರೆದೊಯುತ್ತದೆ ಎಂದು ನಿರ್ದೇಶಕರು ಹೇಳಿದ್ದಾರೆ.

ಹಳ್ಳಿಯ ಲಿಂಕ್ ಎಲ್ಲರಿಗೂ ಇರುತ್ತದೆ. ಆ ಕಾರಣಕ್ಕೆ ಇದು ಎಲ್ಲರಿಗೂ ಕನೆಕ್ಟ್ ಆಗುತ್ತದೆ. ನೂರಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ. 4 ಹಾಡು ಚಿತ್ರದಲ್ಲಿದೆ. ಫೈಟ್ ಕೂಡಾ ಇದೆ ಎಂದು ನಿರ್ದೇಶಕರು ಹೇಳಿದ್ದಾರೆ.

ನಿರ್ದೇಶಕರು ತೀರ್ಥಹಳ್ಳಿಯವರು. ಕಥೆ, ಕವನದ ಆಸಕ್ತಿ ಅವರನ್ನು ಸಿನಿಮಾದ ಕಡೆಗೆ ಕರೆದುಕೊಂಡು ಬಂದಿದೆ.

ನಾಯಕ ಜಯ್ ಶೆಟ್ಟಿ, ಇದೊಂದು ಕೃಷಿ ಮತ್ತು ರೈತರ ಸಿನಿಮಾ. ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಆ ಹಳ್ಳಿಯ ಪಂಚಾಯ್ತಿ ಅಧ್ಯಕ್ಷನಾಗುತ್ತಾನೆ. ಮುಂದೇನಾಗುತ್ತದೆ ಎಂಬುದು ಚಿತ್ರದ ಕಥೆ. ನಾನು ಹೊಸಬನಾದರೂ ನನ್ನ ಮೇಲೆ ನಂಬಿಕೆ ಇಟ್ಟು, ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಧನ್ಯವಾದಗಳು ಎಂದಿದ್ದಾರೆ.

ನಾಯಕಿ ನಿಶಾ ರಜಪೂತ್ ಅವರು ಬಿಜಾಪುರ ಮೂಲದವಳು. ಆದರೆ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಈ ಚಿತ್ರದ ಮೂಲಕ ಕೈ ಗೂಡಿದೆ.

ನಿರ್ದೇಶಕ ಚೇತನ್ ಶೆಟ್ಟಿ

ಒಂಬತ್ತು ವರ್ಷಗಳ ಕಾಲ ಮಾಡಲಿಂಗ್‍ ಮಾಡಿದ್ದೇನೆ. ಹೀಗಿರುವಾಗಲೇ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ನನ್ನ ಭಾಷೆ ಮತ್ತು ನಟನೆಯನ್ನು ತಿದ್ದಿತೀಡಿದ ನಿರ್ದೇಶಕ ಚೇತನ್‍ ಶೆಟ್ಟಿ ಅವರಿಗೆ ಧನ್ಯವಾದಗಳು ಎಂದು ನಾಯಕಿ ರಜಪೂತ್ ಹೇಳಿದ್ದಾರೆ.

ಪ್ರಮುಖ ಪಾತ್ರದಲ್ಲಿ ನಟಿಸಿರುವ ಅಶೋಕ್ ಕುಮಾರ್ ಹಾಗೂ ಮಧುರಗೌಡ ನಟಿಸಿದ್ದಾರೆ. ರಾಜೇಂದ್ರ ಕಾರಂತ್‍, ಅಶ್ವಿನ್‍ ಹಾಸನ್‍, ವಿಕ್ಟರಿ ವಾಸು ತಾರಾ ಬಳಗದಲ್ಲಿ ಇದ್ದಾರೆ.

ಛಾಯಾಗ್ರಾಹಕ ರಾಜು ಹೆಮ್ಮಿಗೆಪುರ, ಕಾರ್ಯಕಾರಿ ನಿರ್ಮಾಪಕ ದಿನೇಶ್ ರಾಜನ್, ನಿರ್ಮಾಪಕಿ ಪ್ರತಿಭಾ ಚಿತ್ರದ ಮೇಲೆ ನಿರೀಕ್ಷೆ ಹೊಂದಿದ್ದಾರೆ.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!