ಇಂದಿನಿಂದ ಏಕರೂಪ ಟಿಕೆಟ್ ದರ ಜಾರಿ

ರಾಜ್ಯ ಸರ್ಕಾರ ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ಇಂದಿನಿಂದ  ಏಕರೂಪ ಟಿಕೆಟ್ ದರ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 12ರಿಂದ  ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ  ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ.

ಮಲ್ಟಿಪ್ಲೆಕ್ಸ್​ಗಳಲ್ಲಿ ಗೋಲ್ಡ್ ಕ್ಲಾಸ್ ವ್ಯವಸ್ಥೆ ಇರುತ್ತವೆ. ಇವುಗಳಿಗೆ 200 ರೂಪಾಯಿ ಟಿಕೆಟ್ ದರದ ಮಿತಿ ಇಲ್ಲ. ಆ ಆಸನಗಳಿಗೆ ಮಲ್ಟಿಪ್ಲೆಕ್ಸ್​ಗಳು ತಮ್ಮಿಷ್ಟದ ದರ ನಿಗದಿ ಮಾಡಬಹುದು. ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ರಿಕ್ಲೈನ್ ಸೀಟ್​ಗಳು ಇರುತ್ತವೆ. ಅವುಗಳಿಗೆ 200 ರೂಪಾಯಿ ಟಿಕೆಟ್ ದರ ಅನ್ವಯ ಆಗುತ್ತದೆ ಎನ್ನಲಾಗಿದೆ. ಆದರೆ ಟಿಕೆಟ್ ಮಂದಿರಗಳಿಗೆ ಆದೇಶ ಪ್ರತಿ ತಲುಪಿಲ್ಲ.

2017-18ನೇ ಸಾಲಿನ ಆಯವ್ಯಯದಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲಿ ಏಕ ರೂಪದ ದರ ಜಾರಿ ಮಾಡಲು ಘೋಷಣೆ ಮಾಡಲಾಗಿತ್ತು. ಆಯವ್ಯಯದ ಘೋಷಣೆಯಂತೆ 2018, ಮೇ 11ರಂದು ಸರ್ಕಾರದ ಆದೇಶ ಆಗಿತ್ತು. ಆದರೆ ಸರ್ಕಾರಿ ಆದೇಶಕ್ಕೆ ತಡೆಯಾಜ್ಞೆ ತಂದ ನಿಟ್ಟಿನಲ್ಲಿ ಆದೇಶವನ್ನು ವಾಪಸ್ಸು ತೆಗೆದುಕೊಳ್ಳಲಾಯಿತು.

ಚಿತ್ರಮಂದಿರಗಳ ಟಿಕೇಟ್ ದರಗಳನ್ನು ಚಿತ್ರಮಂದಿರಗಳ ಮಾಲೀಕರೇ ನಿರ್ಧಾರ ಮಾಡುವ ಪದ್ದತಿ ಜಾರಿಯಲ್ಲಿದೆ. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲಿಕರು ಚಿತ್ರಮಂದಿಗಳನ್ನು ವಾಣಿಜ್ಯ ಚಟುವಟಿಕೆಗಳಾಗಿ ರೂಪಿಸಿಕೊಂಡಿದ್ದಾರೆ.  ಮಲ್ಟಿಫ್ಲೆಕ್ಸ್‌ಗಳು ಟಿಕೆಟ್‌ ಮಾತ್ರವಲ್ಲದೆ ನೀರು ಮತ್ತು ತಿನಿಸುಗಳಿಗೂ ವಿಪರೀತ ದರ ನಿಗದಿ ಮಾಡುತ್ತಿವೆ. ಚಿತ್ರಮಂದಿರಗಳ ದರ ನಿಗದಿ ಮಾಡುವ ಅಧಿಕಾರ ಸರ್ಕಾರಕ್ಕೆ ಇದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!