ತೆಲುಗಿನ ಖ್ಯಾತ ನಟ ಚಿರಂಜೀವಿ ಅವರ ಸೊಸೆ, ರಾಮ್ಚರಣ್ ತೇಜ ಅವರ ಪತ್ನಿ ಉಪಾಸನಾ ಕಮಿನೇನಿ ಕೊನಿಡೇಲಾ ಅವರೀಗ ಆನ್ಲೈನ್ನಲ್ಲಿ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ಅವರ ಆ ಸಾಹಸಕ್ಕೆ ಸದ್ಯ ಟ್ರೆಂಡಿಂಗ್ನಲ್ಲಿರುವ ಕನ್ನಡತಿ, ಸೌತ್ ಸೆನ್ಸೆಷನಲ್ ರಶ್ಮಿಕಾ ಮಂದಣ್ಣ ಕೈ ಜೋಡಿಸಿದ್ದಾರೆ.
ಆರೋಗ್ಯ, ಲೈಫ್ಸ್ಟೈಲ್, ಮಾನಸಿಕ ಮತ್ತು ದೈಹಿಕ ಆರೋಗ್ಯ, ಪ್ರಸ್ತುತ ಟ್ರೆಂಡಿಂಗ್ ವಿಚಾರಗಳನ್ನು ಯೂಆರ್ಲೈಫ್ ಮೂಲಕ ಉಪಾಸನಾ ಹೇಳಹೊರಟಿದ್ದಾರೆ. URLife.co.in. ಅನ್ನೋ ನೂತನ ವೆಬ್ಸೈಟ್ ತೆರೆದಿದ್ದು, ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಉಪಾಸನಾ ಉಸ್ತುವಾರಿ ವಹಿಸಿಕೊಂಡರೆ, ಈ ಹಬ್ಬದ ಸಮಯದಲ್ಲಿ ಅತಿಥಿ ಸಂಪಾದಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ.
ಅಂದಹಾಗೆ, URLife.co.in. ಎಂಬುದು ಒಂದು ಆರೋಗ್ಯಕರ ವೇದಿಕೆ. ಇಲ್ಲಿ ಆಯ್ದ ಕೆಲ ಕ್ಷೇತ್ರಗಳ ನುರಿತ ಪರಣಿತರು, ವೈದ್ಯರು ಸದ್ಯದ ಲೈಫ್ಸ್ಟೈಲ್, ತಂತ್ರಜ್ಞಾನದ ಬಗ್ಗೆ ಈ ವೇದಿಕೆ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಓದುಗರಿಗೆ ಅತ್ಯುತ್ತಮವಾದ ಡಯಟ್ ಟಿಪ್ಸ್, ನುರಿತವರಿಂದ ಉಪಯುಕ್ತ ಮಾಹಿತಿ, ಉಚಿತ ತರಗತಿಗಳು, ವಿಡಿಯೋ ಮಾಹಿತಿ, ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯೂ ಬೆರಳ ತುದಿಯಲ್ಲಿಯೇ URLife.co.in. ನಲ್ಲಿ ಲಭ್ಯವಾಗಲಿದೆ.
ಈ ವಿಶೇಷಗಳ ಗುಚ್ಛದ URLife.co.in. ಗೆ ಈ ಸಲದ ಗೆಸ್ಟ್ ಎಡಿಟರ್ ಆಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದು, ಅವರನ್ನೇ ಆಯ್ದುಕೊಳ್ಳುವುದಕ್ಕೆ ಒಂದಷ್ಟು ಅಂಶಗಳನ್ನು ಸ್ವತಃ ಉಪಾಸನಾ ಹೇಳಿಕೊಂಡಿದ್ದಾರೆ. ರಶ್ಮಿಕಾ ಸದಾ ನಗುಮೊಗದ ಮತ್ತು ಪಾಸಿಟಿವ್ ವೈಬ್ಅನ್ನು ತನ್ನೊಳಗೆ ಇಟ್ಟುಕೊಂಡಿರುವ ನಟಿ. ಕೋಟ್ಯಾಂತರ ಯುವ ಪೀಳಿಗೆಯ ನೆಚ್ಚಿನ ನಟಿಯಾಗಿ ಗುರುತಿಸಿಕೊಳ್ಳುವುದರ ಜತೆಗೆ ನಗುವಿನ ಮೂಲಕವೇ ಆರೋಗ್ಯಕರ ಸಂದೇಶವನ್ನು ನೀಡುತ್ತಿದ್ದಾರೆ. ಅದು URLife.co.in. ನಲ್ಲಿಯೂ ಮುಂದುವರಿಯಲಿದೆ ಎಂಬುದು ಉಪಾಸನಾ ಮಾತು.
ಸೋಷಿಯಲ್ ಮೀಡಿಯಾದಲ್ಲಿ 10 ಮಿಲಿಯನ್ಗೂ ಅಧಿಕ ಹಿಂಬಾಲಕರನ್ನು ಹೊಂದಿರುವ ರಶ್ಮಿಕಾ, ಸದ್ಯ ಭಾರತೀಯ ಸಿನಿಮಾ ರಂಗದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಅದೆಷ್ಟೋ ಯುವಕ ಯುವತಿಯರ ಹಾಟ್ ಫೇವರಿಟ್ ನಟಿಯಾಗಿದ್ದಾರೆ. ಸೇವಿಸುವ ಆಹಾರ ಮತ್ತು ವ್ಯಾಯಾಮ, ಯೋಗದ ಬಗ್ಗೆಯೂ ತಮ್ಮ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿರುತ್ತಾರೆ. ಇದೀಗ ರಶ್ಮಿಕಾ ಅವರ ಲೈಫ್ಸ್ಟೈಲ್ ಬಗ್ಗೆ URife ಮಾಹಿತಿ ಬಿಚ್ಚಿಡಲಿದೆ. ಅವರ ಆರೋಗ್ಯಕರ ಜೀವನದ ಗುಟ್ಟನ್ನು ಓದುಗರಿಗೆ ಈ ಮೂಲಕ ತಲುಪಿಸಲಿದೆ. ಮಾನಸಿಕ ಆರೋಗ್ಯದ ಬಗ್ಗೆಯೂ ಇಲ್ಲಿ ಮಾಹಿತಿ ಇರಲಿದೆ.
ಭಾರತೀಯ ಕಾರ್ಪೊರೇಟ್ ವಲಯದಲ್ಲಿ URLife.co.in 14 ಮಿಲಿಯನ್ ಗೂ ಅಧಿಕ ಓದುಗರನ್ನು ಒಳಗೊಂಡ ಭಾರತದ ಅತಿದೊಡ್ಡ ಆರೋಗ್ಯ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ತಜ್ಞರ ಸಲಹೆ, ಅತ್ಯಾವಶ್ಯಕ ಸಂಪಾದಕೀಯ ವಿಷಯ, ವಿವರವಾದ ಮಾಹಿತಿಯನ್ನು ಒದಗಿಸುತ್ತಿದೆ. ಭಾರತದ ಕಿರಿಯ ಮತ್ತು ಅತ್ಯಂತ ಕ್ರಿಯಾತ್ಮಕ ಯೋಗಕ್ಷೇಮ ಮೇಲ್ವಿಚಾರಕರಾದ ಉಪಾಸನ ಕೊನಿಡೆಲಾ ಅವರ ಮಾರ್ಗದರ್ಶನದಲ್ಲಿ URLife.co.in ಅಭಿವೃದ್ಧಿಪಡಿಸಲಾಗಿದೆ.
Be the first to comment