ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದೆ ಎನ್ನುವ ಮಾಹಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ದೊರೆತಿದೆ.
ನ್ಯಾ. ನಾಗಮೋಹನ್ ದಾಸ್ ಸಮಿತಿ ವರದಿ ಪ್ರಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡುವಂತಿಲ್ಲ ಎನ್ನುವ ಮಾಹಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ದೊರೆತಿದೆ. ಸಮಿತಿ ವರದಿ ಆಧರಿಸಿ ನಟ ಪುನೀತ್ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ತಾಂತ್ರಿಕ ತೊಡಕು ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಹೃದಯಾಘಾತದಿಂದ ಅಭಿಮಾನಿಗಳನ್ನು ಅಗಲಿದ ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಅಭಿಯಾನವನ್ನೂ ಆರಂಭಿಸಿದ್ದಾರೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಕೂಡಾ ನಡೆದಿದೆ. ಆದರೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡುವುದು ಕಷ್ಟ ಎನ್ನುವ ಮಾತು ಕೇಳಿ ಬಂದಿದೆ.
ಇಂದು ಸಂಜೆ ಪುನೀತ್ ಅವರ ಅಂತ್ಯಕ್ರಿಯೆ ನಡೆಯಲಿದ್ದು ಅಂತ್ಯಕ್ರಿಯೆಗೆ ಸಿದ್ಧತೆ ಆರಂಭವಾಗಿದೆ. ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ವಹಿಸಿದೆ.
ನಿನ್ನೆ ಪುನೀತ್ ರಾಜ್ ಕುಮಾರ್ ಜಿಮ್ ಮಾಡುವ ವೇಳೆ ಏಕಾಏಕಿ ಕುಸಿದು ಹೃದಯಾಘಾತದಿಂದ ನಿಧನರಾದರು.
Be the first to comment