ಚಂದನ್ ಹಾಗೂ ನಿವೇದಿತಾ ಡಿವೋರ್ಸ್ ಗೆ ಸಲಗ ಸಿನಿಮಾದ ನಾಯಕಿ ಸಂಜನಾ ಆನಂದ್ ಕಾರಣ ಎಂದು ಹೇಳಲಾಗಿದ್ದು ಈ ಬಗ್ಗೆ ಸಂಜನಾ ಪ್ರತಿಕ್ರಿಯಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಸಂಜನಾ, ನನಗೆ ಮತ್ತು ಚಂದನ್ ಶೆಟ್ಟಿ ಅವರಿಗೆ ಮದುವೆ ಫಿಕ್ಸ್ ಆಗಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿದರು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಡಿವೋರ್ಸ್ಗೆ ನಾನೇ ಕಾರಣ ಎಂದರು. ಕೆಲವರು ಎಐ ತಂತ್ರಜ್ಞಾನದ ಮೂಲಕ ನಮ್ಮಿಬ್ಬರಿಗೆ ಮದುವೆಯ ಫೋಟೊಗಳನ್ನು ವೈರಲ್ ಮಾಡಿದ್ದರು. ಮಂಗಳೂರಿನಲ್ಲಿ ನಮ್ಮಿಬ್ಬರ ಮದುವೆ ನಡೆಯಲಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಬಗ್ಗೆಸುಳ್ಳು ಸುದ್ದಿಗಳು ಬಂದಾಗ ನಾನು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಸಂಬಂಧಿಕರೆಲ್ಲ ನನಗೆ ಕರೆ ಮಾಡಿ ಚಂದನ್ ಶೆಟ್ಟಿ ಜೊತೆ ಮದುವೆಯಾಗ್ತಿದೀಯಾ ಅಂತೆ. ನಮಗೆಲ್ಲ ಕರಿಲೇ ಇಲ್ಲ ಎಂದು ಕೇಳತೊಡಗಿದಾಗ ಗಾಬರಿಯಾಯಿತು. ಸುಮ್ಮನೆ ಇದ್ದರೆ ಇದೆಲ್ಲ ಇನ್ನೂ ಹೆಚ್ಚಾಗುತ್ತದೆ ಎಂದು ನಾನು ಸೋಶಿಯಲ್ ಮೀಡಿಯಾ ಮೂಲಕ ಸ್ಪಷ್ಟೀಕರಣವನ್ನು ನೀಡಿದೆ ಎಂದಿದ್ದಾರೆ.
ಬಿಗ್ ಬಾಸ್ ಮೂಲಕ ಪರಿಚಯವಾದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಳಿಕ ಮದುವೆಯಾದರು. ಆದರೆ ಮದುವೆ ಹೆಚ್ಚು ದಿನ ಉಳಿಯಲಿಲ್ಲ. ಕೆಲ ವರ್ಷಕ್ಕೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಡಿವೋರ್ಸ್ ಪಡೆದು ದೂರ ದೂರವಾಗಿದ್ದಾರೆ. ಆದರೆ ಡಿವೋರ್ಸ್ ಗೆ ಕಾರಣ ಮಾತ್ರ ರಿವೀಲ್ ಆಗಿಲ್ಲ.
—–
Be the first to comment